Homeಚಿತ್ರವರದಿಕೊಂಬೆಟ್ಟು ಶಾಲೆಯಲ್ಲಿ ಮಕ್ಕಳ ಮಾಸೋತ್ಸವಕ್ಕೆ ಮಾಹಿತಿ ಕಾರ್ಯಕ್ರಮ

ಕೊಂಬೆಟ್ಟು ಶಾಲೆಯಲ್ಲಿ ಮಕ್ಕಳ ಮಾಸೋತ್ಸವಕ್ಕೆ ಮಾಹಿತಿ ಕಾರ್ಯಕ್ರಮ

ಪುತ್ತೂರು: ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು, ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ದ.ಕ. ಜಿಲ್ಲೆಯ ವತಿಯಿಂದ ಮಹಿಳಾ ಪೊಲೀಸ್ ಠಾಣೆಯ ಸಹಕಾರದೊಂದಿಗೆ ಮಹಿಳೆ ಮತ್ತು ಮಕ್ಕಳ ಸುರಕ್ಷತೆಯ ಕುರಿತು ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಾಹಿತಿ ಕಾರ್ಯಕ್ರಮ ನಡೆಯಿತು.

ಮಹಿಳಾ ಪೊಲೀಸ್ ಠಾಣೆಯ ಎ.ಎಸ್.ಐ ಚಂದ್ರಹಾಸ ಶೆಟ್ಟಿ ಮತ್ತು ಜಯಶ್ರೀಯವರು ಹೆಣ್ಣುಮಕ್ಕಳ ಸುರಕ್ಷತೆಯ ಕುರಿತು ಮಾಹಿತಿ ನೀಡಿದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷೆ ನಯನಾ ರೈ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯೆ ಶಾರದಾ ಕೇಶವ್, ಮಹಿಳಾ ಪೊಲೀಸ್ ಠಾಣೆಯ ಚಿತ್ರಲೇಖಾ, ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ ಪ್ರಾಂಶುಪಾಲ ವಸಂತ ಮೂಲ್ಯ, ಶಿಕ್ಷಕಿ ವಿಮಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಕಿ ಗೀತಾಮಣಿ ಎಸ್ ಸ್ವಾಗತಿಸಿ, ವಂದಿಸಿದರು

error: Content is protected !!
Breaking
Exit mobile version