ಪುತ್ತೂರಿನಿಂದ ಸುಳ್ಯ ಕಡೆಗೆ ಆಗಮಿಸುತ್ತಿದ್ದ ಬಸ್ನಿಂದ ಬಿದ್ದು ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಅ.೩೦ರಂದು ಜಾಲ್ಸೂರಿನಲ್ಲಿ ಸಂಭವಿಸಿದೆ.
ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಚಿನ್ನಪ್ಪ ಎಂಬವರು ಜಾಲ್ಸೂರಿನ ತಮ್ಮ ಸಂಬಂಧಿಕರ ಮನೆಗೆ ಪುತ್ತೂರಿನಿಂದ ಕೆಎಸ್ಆರ್ಟಿಸಿ ಬಸ್ನಿಂದ ಬಂದು ಜಾಲ್ಸೂರಿನಲ್ಲಿ ಬಸ್ ನಿಲ್ಲುವ ಮೊದಲು ಇಳಿಯಲು ಪ್ರಯತ್ನಿಸಿದರು. ಆಗ ಆಯತಪ್ಪಿ ಕೆಳಕ್ಕೆ ಬಿದ್ದು ಗಾಯಗೊಂಡರು.