Breaking News

ಗೂನಡ್ಕ ಮಾರುತಿ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ರಾಷ್ಟ್ರೀಯ ಐಕ್ಯತಾ ಸ್ಪಪ್ತಾಹ ಕಾರ್ಯಕ್ರಮ

Advt_Headding_Middle
Advt_Headding_Middle

ಗೂನಡ್ಕ ಮಾರುತಿ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ರಾಷ್ಟ್ರೀಯ ಐಕ್ಯತಾ ಸ್ಪಪ್ತಾಹ ಕಾರ್ಯಕ್ರಮವು ನ.೨೫ರಂದು ಆಚರಿಸಲಾಯಿತು. ಕೆವಿಜಿ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಶೇಖರ್‌ರವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮಾರುತಿ ಸಂಸ್ಥೆಯ ಕಾರ್ಯದರ್ಶಿ ಕಿಶೋರ್‌ಕುಮಾರ್ ಬಿ.ಆರ್., ಯೋಗಶಿಕ್ಷಕ ಡಾ. ನಾಗೇಶ್, ನೃತ್ಯ ತರಬೇತುದಾರ ಚರಣ್, ಶಾಲಾ ಉಪಪ್ರಾಂಶುಪಾಲೆ ಅನುಸೂಯ ಕೆ.ಆರ್.ರವರು ಉಪಸ್ಥಿತರಿದ್ದರು.

ಡಾ. ಚಂದ್ರಶೇಖರ್‌ರವರು ವಿದ್ಯಾರ್ಥಿಗಳಿಗೆ ಭಾವೈಕ್ಯತೆಯ ಪ್ರಮಾಣ ವಚನ ಬೋಧಿಸಿದರು. ರಾಷ್ಟ್ರೀಯ ಭಾವೈಕ್ಯತೆಯ ಅವಶ್ಯಕತೆ ನಮ್ಮ ದೇಶಕ್ಕೆ ಅನಿವಾರ್ಯವಾಗಿದೆ. ಇದನ್ನು ಬಾಲ್ಯದಲ್ಲಿಯೇ ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ಡಾ. ಚಂದ್ರಶೇಖರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಸಹಶಿಕ್ಷಕಿ ಚಿತ್ರಲೇಖ ವಂದಿಸಿದರು. ಕಾರ್ಯಕ್ರಮದ ಕೊನೆಗೆ ಸಿಹಿತಿಂಡಿ ವಿತರಿಸಲಾಯಿತು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.