ಸುಳ್ಯ ತಾಲೂಕು ಅಲ್ಪಸಂಖ್ಯಾತರ ಕಾಂಗ್ರೇಸ್ ಘಟಕದ ಅಧ್ಯಕ್ಷರಾಗಿ ಜಿ.ಕೆ ಹಮೀದ್ ಗೂನಡ್ಕ

Advt_Headding_Middle
Advt_Headding_Middle

ಸುಳ್ಯ ಬ್ಲಾಕ್ ಕಾಂಗ್ರೇಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಜಿ.ಕೆ ಹಮೀದ್ ಗೂನಡ್ಕ ರವರನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ.ಬಿ ರಮಾನಾಥ ರೈ ಹಾಗೂ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಎನ್ ಎಸ್ ಕರೀಂರವರು ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ನೇಮಕ ಮಾಡಿರುತ್ತಾರೆ. ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀಯುತ ಮೋನು, ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಕಾರ್ಯದರ್ಶಿ ಟಿ.ಎಂ ಶಹೀದ್, ಕರ್ನಾಟಕ ವಕ್ಪ್ ಸಲಹಾ ಸಮಿತಿ ಸದಸ್ಯರಾದ ಎಸ್.ಸಂಶುದ್ದೀನ್, ಅಲ್ಪಸಂಖ್ಯಾತ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಲಾರೆನ್ಸ್, ದಕ್ಷಿಣ ಕನ್ನಡ ವಕ್ಪ್ ಸಲಹಾ ಸಮಿತಿ ಸದಸ್ಯರಾದ ಹಾಜಿ ಮುಸ್ತಫ, ಪಂಜ ತಾಲೂಕು ಪಂಚಾಯತ್ ಸದಸ್ಯರಾದ ಗಪೂರ್ ಕಳಂಜ, ಪ್ರದೇಶ ಕಾಂಗ್ರೇಸ್ ಸಮಿತಿಯ ನೂರುದ್ದೀನ್ ಸಾಲ್ಮರ, ಜಿಲ್ಲಾ ಯೂತ್ ಕಾಂಗ್ರೇಸ್ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ, ನಿಕಟ ಪೂರ್ವ ಅಧ್ಯಕ್ಷರಾದ ಮಜೀದ್ ನಡುವಡ್ಕ, ಅಬೂಬಕ್ಕರ್ ಅಡ್ಕಾರ್, ಹಾಜಿ ಬೀರಾ ಮೊಯಿದೀನ್ ಕನಕಮಜಲು, ಮೂಸಾಕುಂಞಿ ವಕೀಲರು, ಮಹಮ್ಮದ್ ಫವಾಝ್ ವಕೀಲರು, ಜಮಾಲುದ್ದೀನ್ ಬೆಳ್ಳಾರೆ, ಅಬ್ದುಲ್ ರಹಿಮಾನ್ ಮೊಗರ್ಪಣೆ, ತಾಜ್ ಮಹಮ್ಮದ್ ಸಂಪಾಜೆ, ಯುವ ಕಾಂಗ್ರೇಸ್ ಅಧ್ಯಕ್ಷರಾದ ಸಿದ್ದೀಕ್ ಕೊಕ್ಕೋ, ಸುಳ್ಯ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ, ಜಿಲ್ಲಾ ಎನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ, ನಝೀರ್ ಶಾಂತಿನಗರ, ಇಸ್ಮಾಯಿಲ್ ಪಡ್ಪಿನಂಗಡಿ, ಮೊದಲಾದವರು ಉಪಸ್ಥಿತರಿದ್ದರು.
ಜಿ.ಕೆ ಹಮೀದ್ ರವರು ಪ್ರಸ್ತುತ ದ.ಕ ಜಿಲ್ಲಾ ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟದ ಉಪಾಧ್ಯಕ್ಷರಾಗಿ ಸುಳ್ಯ ತಾಲೂಕು ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾಗಿ ಸತತ ೪ ಬಾರಿ ಆಯ್ಕೆಗೊಂಡಿದ್ದು ೨೦೧೪ ರಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಪ್ರತಿಷ್ಟಿತ ಗಾಂಧಿಗ್ರಾಮ ಪುರಸ್ಕಾರ ಪಡೆದ ಗ್ರಾಮ ಪಂಚಾಯತ್ ಆಗಿ ೫ ಲಕ್ಷ ಅನುದಾನ ಪಡೆದು ರಾಜ್ಯ ಮಟ್ಟದಲ್ಲಿ ಗುರುತಿಸಿರುತ್ತಾರೆ. ಕಲ್ಲುಗುಂಡಿ ಸಿರಾಜುಲ್ ಇಸ್ಲಾಂ ಎಸೋಸಿಯೇಶನ್ ಅಧ್ಯಕ್ಷರಾಗಿ, ಪೇರಡ್ಕ ಉರೂಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಎಂ.ಜೆ ಎಂ ಪೇರಡ್ಕ ಇದರ ಆಡಳಿತ ಸಮಿತಿ ಸದಸ್ಯರಾಗಿ, ಗ್ರಾಮ ಪಂಚಾಯತ್ ಅತ್ಯುತ್ತಮ ಸದಸ್ಯ ಎಂಬ ನೆಲೆಯಲ್ಲಿ ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯು ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿರುತ್ತಾರೆ. ಹಲವು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಇದೀಗ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.