Breaking News

ಅಡ್ಕಾರು : ಅಂಜನಾದ್ರಿಯಲ್ಲಿ ಸ್ವಚ್ಚತಾ ಅಭಿಯಾನ

Advt_Headding_Middle
Advt_Headding_Middle

ಅಡ್ಕಾರು ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ, ದೇವಸ್ಥಾನದಲ್ಲಿ ನಡೆಯುವ ಕಾಲಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಾಲ್ಸೂರು ‘ಎ’ ಒಕ್ಕೂಟದ ಸದಸ್ಯರು ಹಾಗೂ ಊರವ ಭಕ್ತ ವೃಂದದ ಸಹಕಾರದೊಂದಿಗೆ ನಡೆಯಿತು. ಶ್ರೀ ಕ್ಷೇ.ಧ.ಗ್ರಾ.ಯೋ. ಜಾಲ್ಸೂರು ‘ಎ’ ಒಕ್ಕೂಟದ ಅಧ್ಯಕ್ಶ ಜಗದೀಶ್ ಕೆಮನಬಳ್ಳಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಸೇವಾ ಪ್ರತಿನಿಧಿ ಶ್ರೀಮತಿ ಸುಗಂಧಿಯವರು ಮಾಹಿತಿ ನೀಡಿದರು. ರಾಮಕೃಷ್ಣ ಬೀರಮಂಗಲ ಉಪಸ್ಥಿತರಿದ್ದರು. ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನಾಗರಾಜ ಭಟ್ ಸಂದರ್ಭೋಚಿತವಾಗಿ ಮಾತನಾಡಿದರು. ಶ್ರೀ ಕ್ಷೇತ್ರದ ಆಡಳಿತ ಧರ್ಮದರ್ಶಿ ಮಂಡಳಿಯ ಸದಸ್ಯರು, ಸೇವಾ ಸಮಿತಿ, ಮಹಿಳಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸುಮಾರು ೨೦೦ಕ್ಕೂ ಹೆಚ್ಚು ಮಂದಿ ಸದಸ್ಯರು ಅಭಿಯಾನದಲ್ಲಿ ಭಾಗವಹಿಸಿದ್ದು ಎಲ್ಲರ ಶ್ಲಾಘನೆಗೆ ಪಾತ್ರವಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.