Breaking News

ದುಗ್ಗಲಡ್ಕದಲ್ಲಿ ಸುಳ್ಯ ತಾಲೂಕು ೨೨ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Advt_Headding_Middle
Advt_Headding_Middle

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು, ಮಿತ್ರ ಯುವಕ ಮಂಡಲ ಕೊಯಿಕುಳಿ, ಕುರಲ್ ತುಳು ಕೂಟ ದುಗ್ಗಲಡ್ಕ ಇವುಗಳ ಆಶ್ರಯದಲ್ಲಿ ದುಗ್ಗಲಡ್ಕ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಸುಳ್ಯ ತಾಲೂಕು ೨೨ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅರಂಭಗೊಂಡಿದೆ.
ಸಾಹಿತಿ, ಸಂಘಟಕ ವಸಂತ ಶೆಟ್ಟಿ ಬೆಳ್ಳಾರೆ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಮ್ಮೇಳನವನ್ನು ಮೈಸೂರು ಕ್ಷೇತ್ರ ನಿರ್ದೇನಾಲಯದ ಮುಖ್ಯಸ್ಥೆ, ಲೇಖಕಿ ಡಾ.ಟಿ.ಸಿ ಪೂರ್ಣಿಮಾ ಉದ್ಘಾಟಿಸಿದರು.
ಸುಳ್ಯ ಶಾಸಕ ಎಸ್.ಅಂಗಾರ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಸಾಹಿತಿ ಅರವಿಂದ ಚೊಕ್ಕಾಡಿ ಹೊಸ ಕೃತಿಗಳನ್ನು ಬಿಡುಗಡೆಗೊಳಿಸಿದರು. ತಾಲೂಕು ಪಂಚಾಯತ ಅಧ್ಯಕ್ಷ ಚನಿಯ ಕಲ್ತಡ್ಕ ವಸ್ತು ಪ್ರದರ್ಶನ ಮತ್ತು ಪುಸ್ತಕ ಪ್ರದರ್ಶನ ಬಿಡುಗಡೆಗೊಳಿಸಿದರು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶೀಲಾವತಿ ಮಾಧವ ರಾಷ್ಟ್ರ ಧ್ವಜವನ್ನು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಪರಿಷತ್ತಿನ ದ್ವಜವನ್ನು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ ಕನ್ನಡ ಧ್ವಜವನ್ನು ಆರೋಹಣಗೊಳಿಸಿದರು. ಎಂ.ಕೆ.ಪುರುಷೋತ್ತಮ ಗೌಡ ಮಾಣಿಬೆಟ್ಟು ಮೆರವಣಿಗೆ ಉದ್ಘಾಟಿಸಿದರು.
ನಿಕಟ ಪೂರ್ವ ಸಮ್ಮೇಳನಾಧ್ಯಕ್ಷ ಲಕ್ಷ್ಮೀಶ ಚೊಕ್ಕಾಡಿ ಮಾತನಾಡಿದರು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ‍್ಯದರ್ಶಿ ಚಂದ್ರಶೇಖರ ಪೇರಾಲು ಸ್ವಾಗತಿಸಿದರು. ಪ್ರದೀಪ ಕಲ್ಕೂರ ಆಶಯ ನುಡಿಗಳನ್ನಾಡಿದರು. ಡಾ. ಹರಪ್ರಸಾದ್ ತುದಿಯಡ್ಕ ಪ್ರಸ್ತಾವನೆಗೃದರು. ಸ್ಮರಣ ಸಂಚಿಕೆ ಸಂಪಾದಕ ದೊಡ್ಡಣ್ಣ ಬರೆಮೇಲು ಮಾತನಾಡಿದರು. ಎಂ.ಜೆ.ಶಶಿಧರ ಸಮ್ಮೇಳನಧ್ಯಕ್ಷರನ್ನು ಪರಿಚಯಿಸಿದರು. ತೇಜಸ್ವಿ ಕಡಪಳ ವಂದಿಸಿದರು. ಬೇಬಿ ವಿದ್ಯಾ ಕಾರ‍್ಯಕ್ರಮ ನಿರೂಪಿಸಿದರು. ಗಿರಿಜಾ ಎಂ.ವಿ ಮತ್ತು ಪೂರ್ಣಿಮಾ ಮಡಪ್ಪಾಡಿ ಆಶಯಗೀತೆ ಹಾಡಿದರು. ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಕೆ.ಟಿ ವಿಶ್ವನಾಥ್, ಜಿಲ್ಲಾ ಕ.ಸಾ.ಪ. ವಕ್ತಾರ ಜನಾರ್ದನ ಹಂದೆ, ಗೌರವ ಕಾರ್ಯದರ್ಶಿ ಬಿ.ತಮ್ಮಯ್ಯ ಪುತ್ತೂರು ಕ.ಸಾ.ಪ. ಅಧ್ಯಕ್ಷ ಐತ್ತಪ್ಪ ನಾಯ್ಕ, ಭವಾನಿಶಂಕರ ಕಲ್ಮಡ್ಕ, ಸಿರಿಲ್ ಡಿಸೋಜಾ, ಮೊದಲಾದವರು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.