ಗುತ್ತಿಗಾರು: ವಿದ್ಯಾರ್ಥಿಗಳ ಯಶಸ್ಸು ಕನಸಲ್ಲ ತರಬೇತಿ ಕಾರ್ಯಾಗಾರ

Advt_Headding_Middle
Advt_Headding_Middle


ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಪ್ರವರ್ತಕರು ವಿಜಯಾ ಬ್ಯಾಂಕ್ ಮತ್ತು ವಿಜಯ ಗ್ರಾಮ ಸಮಿತಿ ನಾಲ್ಕೂರು ಇದರ ಆಶ್ರಯದಲ್ಲಿ ಜ. ೨೦ರಂದು ಗುತ್ತಿಗಾರು ಸ.ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ “ವಿದ್ಯಾರ್ಥಿಗಳೇ ಯಶಸ್ಸು ಕನಸಲ್ಲ” ಎಂಬ ವಿಷಯದಲ್ಲಿ ತರಬೇತಿ ಕಾರ್ಯಗಾರ ನಡೆಯಿತು. ವಿದ್ಯಾರಶ್ಮಿ ವಿದ್ಯಾಲಯದ ಪ್ರಾಮಶುಪಾಲರಾದ ಸೀತಾರಾಮ ಕೇವಳ ತರಬೇತಿ ನೀಡಿದರು. ನಾಲ್ಕುರು ವಿಜಯ ಗ್ರಾಮ ಸಮಿತಿ ಅಧ್ಯಕ್ಷ ಟಿ.ಆರ್.ಉದಯಕುಮಾರ್ ಸಭಾಧ್ಯಕ್ಷತೆ ವಹಿಸಿದ್ದರು. ಸಮಿತಿಯ ಕಾರ್ಯದರ್ಶಿ ದಿನೇಶ್ ಹಾಲೆಮಜಲು ಪ್ರಸ್ತಾವನೆಗೈದರು. ಶಾಲಾ ಹಿರಿಯ ಶಿಕ್ಷಕಿ ನೆಲ್ಸನ್ ಕ್ಯಾಸ್ಟೊಲಿನ್ ಕಾರ್ಯಕ್ರಮ ನಿರೂಪಿಸಿದರು. ಸುಮಾರು ೧೫೦ ಮಂದಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕ, ಶಿಕ್ಷಕಿಯರು ತರಬೇತಿಯಲ್ಲಿ ಭಾಗವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.