ಕೇರ್ಪಡ: ಮಹಿಷಮರ್ದಿನಿ ದೇವಸ್ಥಾನದಲ್ಲಿ ಉಚಿತ ವೈದ್ಯಕೀಯ ಶಿಬಿರ

Advt_Headding_Middle
Advt_Headding_Middle
Advt_Headding_Middle

ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಎ. ೨೬ರಂದು ನಡೆಯುವ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವದ ಅಂಗವಾಗಿ ಎ. ೨೨ರಂದು ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ನುರಿತ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಶಿಬಿರ ಮತ್ತು ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಿತು. ಚರ್ಮ, ಎಲುಬು, ಕೀಲು, ಮಕ್ಕಳ ಚಿಕಿತ್ಸೆ, ಕಿವಿ, ಮೂಗು, ಗಂಟಲು, ಸ್ತ್ರೀರೋಗ ಚಿಕಿತ್ಸೆ ಮತ್ತು ಚೆಕಪ್ ತಜ್ಞ ವೈದ್ಯರಿಂದ ಇಸಿಜಿ, ಸಕ್ಕರೆ ಖಾಯಿಲೆ, ರಕ್ತದೊತ್ತಡ, ತಪಾಸಣೆ ಮತ್ತು ದಂತಕ್ಕೆ ಸಂಬಂಧಪಟ್ಟ ಹಲ್ಲಿನ ಫಿಲ್ಲಿಂಗ್, ಕ್ಲೀನಿಂಗ್ ಮತ್ತು ಇತರ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಯಿತು. ನೂರಾರು ಜನ ಇದರ ಸದುಪಯೋಗ ಪಡೆದುಕೊಂಡರು.
ಪ್ರತಿ ಖಾಯಿಲೆಗಳಿಗೆ ಪ್ರತ್ಯೇಕ ಡಾಕ್ಟರ್‌ಗಳು, ದಾದಿಗಳು, ಸಹಾಯಕರ ವ್ಯವಸ್ಥೆಯನ್ನು ದೇವಳದ ವತಿಯಿಂದ ಅಚ್ಚುಕಟ್ಟಾಗಿ ಮಾಡಲಾಗಿತ್ತು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಕ್ಷಯ ಆಳ್ವ ಪಿ.ಡಿ. ಸಭಾಧ್ಯಕ್ಷತೆ ವಹಿಸಿ ಗ್ರಾಮೀಣ ಪ್ರದೇಶದ ಜನರಿಗೆ ಸೌಲಭ್ಯ ವಂಚಿತರಾಗಬಾರದು ಮತ್ತು ಹೆಚ್ಚಿನ ಮಾಹಿತಿ ಬರುವಂತಾಗಬೇಕು ಎಂದು ಈ ಶಿಬಿರವನ್ನು ಆಯೋಜಿಸಿದ್ದೇವೆ. ತುಂಬಾ ಜನರು ಪ್ರಯೋಜನ ಪಡೆದುಕೊಂಡಿದ್ದಾರೆಂದು ಹೇಳಿದರು. ಕುಕ್ಕೆ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಭಟ್ ಕರಿಕ್ಕಳ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಡಾ. ಶ್ರೀಪತಿ ರಾವ್ ದೇವಳದ ಗೌರವ ಸಲಹೆಗಾರರಾದ ರಘುನಾಥ ರೈ ಕಟ್ಟಬೀಡು, ಜೀರ್ಣೋದ್ಧಾರ ಸಮಿತಿ ಸದಸ್ಯ ಬೊಳ್ಕಜೆ ಕುಂಞಣ್ಣ ಗೌಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪಸಮಿತಿ ಕಾರ್ಯದರ್ಶಿ ಬಾಲಕೃಷ್ಣ ಪೂಜಾರಿ ನೂಜಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅರ್ಚಕ ರಾಘವೇಂದ್ರ ಬೈಪಡಿತ್ತಾಯ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.