ಪಂಜ : ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಬ್ಯಾಂಕಿನಿಂದ ಪ್ರಶಸ್ತಿ-ಪುರಸ್ಕಾರ

Advt_Headding_Middle
Advt_Headding_Middle

 

ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ 21017-18 ನೇ ಸಾಲಿನಲ್ಲಿ ಜಿಲ್ಲಾ ಬ್ಯಾಂಕಿನ ವಿಶೇಷ ಪ್ರೋತ್ಸಾಹಕ ಬಹುಮಾನ ದೊರೆತಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್ ರವರು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚಂದ್ರಶೇಖರ ಶಾಸ್ತ್ರಿ ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿಯವರನ್ನು ಸನ್ಮಾನಿಸಿ ಪ್ರಶಸ್ತಿ ನೀಡಿ ಪುರಸ್ಕರಿಸಿದರು.ಸಂಘದ ಉಪಾಧ್ಯಕ್ಷ ಲೋಕೇಶ್ ಬರೆಮೇಲು, ನಿರ್ದೇಶಕರಾದ ಗಣೇಶ್ ಪೈ, ಮೋಹಿನಿ ಬಿ ಯಲ್ ಬೊಳ್ಮಲೆ , ಮೇಲ್ವಿಚಾರಕ ಮನೋಜ್ ಕುಮಾರ್ , ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ದೇವರಾಜ್ ಕೆ.ಎಸ್. ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.