ಆಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ

Advt_Headding_Middle
Advt_Headding_Middle

ಶ್ರೀ ಸದಾಶಿವ ದೇವಸ್ಥಾನ ಆಲೆಟ್ಟಿಯಲ್ಲಿ ಸೆ. 2 ರಂದು ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಆಚರಿಸಲಾಯಿತು. ದೇವಳದಲ್ಲಿ ನಿತ್ಯಪೂಜೆಯಗಿ ಸಾಮೂಹಿಕ ಸತ್ಯನಾರಾಯಣ ಪೂಜೆಯು ಪ್ರಧಾನ ಅರ್ಚಕರಾದ ಸುಫ್ರೀಂ ಭಟ್ ನೇತೃತ್ವದಲ್ಲಿ ನಡೆಯಿತು.

ಕೃಷ್ಣಾಷ್ಠಮಿ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಉದ್ಘಾಟನಾ ಸಮಾರಂಭದಲ್ಲಿ ಗುಂಡ್ಯ ಮಾಡಾರ ಮನೆ ಉಳ್ಳಾಕುಲು ದೈವಸ್ಥಾನದ ಅಧ್ಯಕ್ಷ ಅಶೋಕ್ ಪ್ರಭು ದೀಪ ಬೆಳಗಿಸಿ ಉದ್ಘಾಟಿಸಿ ಸ್ಪರ್ಧೆಗೆ ಚಾಲನೆ ನೀಡಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಸಿ.ಪ್ರಸನ್ನ ಬಡ್ಡಡ್ಕ ಉಪಸ್ಥಿತರಿದ್ದರು.

 

ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆಯ ನಂತರ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಸೇವಾ ಸಮಿತಿ ಮಾಜಿ ಅಧ್ಯಕ್ಷಷ ಎಸ್.ಎನ್.ಜನಾರ್ದನ ಗೌಡ ಬಹುಮಾನ ವಿತರಿಸಿದರು. ಹಿರಿಯರಾದ ಬೆಳ್ಳಕುಂಞಿ ಗುಂಡ್ಯ ಉಪಸ್ಥಿತರಿದ್ದರು. ವ್ಯ.ಸ. ಸದಸ್ಯ ಚಂದ್ರಕಾಂತ ನಾರ್ಕೋಡು ಸ್ವಾಗತಿಸಿದರು. ಕು. ದಿಶಾ ಆಲೆಟ್ಟಿ ಪ್ರಾರ್ಥಿಸಿದರು. ಪ್ರವೀಣ ಆಲೆಟ್ಟಿ ವಂದಿಸಿದರು. ಸೇವಾ ಸಮಿತಿ ಕಾರ್ಯದರ್ಶಿ ರಾಮಚಂದ್ರ ಆಲೆಟ್ಟಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಭ. ಸಂಘದ ಕಾರ್ಯದರ್ಶಿ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವ್ಯ.ಸ. ಸದಸ್ಯರು, ಭಜನಾ ಸಂಘದ ಸದಸ್ಯರು ಸೇವಾ ಸಮಿತಿ ಸದಸ್ಯರು ಹಾಗೂ ಗ್ರಾಮದ ಭಕ್ತಾದಿಗಳು ಭಾಗವಹಿಸಿದ್ದರು. ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.