Breaking News

ರೆಡ್‌ಕ್ರಾಸ್ ಸಂಸ್ಥೆ ವ್ಯಕ್ತಿಯನ್ನು ಶಕ್ತಿಯನ್ನಾಗಿಸುತ್ತದೆ – ಸಚೇತ್ ಸುವರ್ಣ

Advt_Headding_Middle
Advt_Headding_Middle

 

ರೆಡ್‌ಕ್ರಾಸ್ ಸಂಸ್ಥೆ ಅಂತಾರಾಷ್ಟ್ರೀಯ ಸಂಸ್ಥೆಯಾಗಿದ್ದು, ಅದು ಜನರಲ್ಲಿ ಸಮಾಜಮುಖಿಯಾಗಿ ಬೆಳೆಯುವ ವ್ಯಕ್ತಿತ್ವವನ್ನು ಬೆಳೆಸುತ್ತದೆ. ಮನುಷ್ಯರನ್ನು ಮನುಷ್ಯರನ್ನಾಗಿ ಕಾಣಲು ಕಲಿಸುತ್ತದೆ. ಮನುಷ್ಯತ್ವವನ್ನು ಗೌರವಿಸುವ ಸಂಸ್ಥೆ ಇದಾಗಿದ್ದು, ವ್ಯಕ್ತಿಯನ್ನ ಶಕ್ತಿಯನ್ನಾಗಿಸುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ರೆಡ್‌ಕ್ರಾಸ್ ಘಟಕದ ಚಯರ್‌ಮನ್ ಸಚೇತ್ ಸುವರ್ಣ ಅಭಿಪ್ರಾಯ ವ್ಯಕ್ತ ಪಡಿಸಿದರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಹಮ್ಮಿಕೊಂಡ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಕುರಿತು ಮಾಹಿತಿ ನೀಡುತ್ತಾ ಮಾತನಾಡುತ್ತಿದ್ದರು.


ಎನ್ನೆಂಸಿಯ ಯುವ ರೆಡ್‌ಕ್ರಾಸ್ ಘಟಕ ವ್ಯವಸ್ಥಿತವಾಗಿ ಕಾರ್ಯಕ್ರಮಗಳನ್ನು ರೂಪಿಸುವುದರೊಂದಿಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ರಾಜ್ಯ ಮಟ್ಟದಲ್ಲೇ ಅತ್ತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇನ್ನಷ್ಟು ಅರ್ಥಪೂರ್ಣ ಕಾರ್ಯಕ್ರಮಗಳೊಂದಿಗೆ ಮುಂದುವರಿದು ಈ ಮೂಲಕ ನಿಮ್ಮ ಭವಿಷ್ಯವನ್ನು ರೂಪಿಸುವ ಕಡೆ ಗಮನಹರಿಸಿ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ರತ್ನಾವತಿ ಡಿ ಮಾತನಾಡಿ ಯುವ ರೆಡ್ ಕ್ರಾಸ್ ಘಟಕ ಸಮಾಜದ ಜೊತೆ ಬೆರೆಯುವ ಕೆಲಸ ಮಾಡುತ್ತಿದೆ. ಜೀವನಕ್ಕೆ ಭದ್ರ ತಳಪಾಯ ಹಾಕಿ ಕೊಡುವ ವಿದ್ಯಾರ್ಥಿ ಜೀವನದಲ್ಲಿ ಇಂತಹ ಸಂಸ್ಥೆಗಳಲ್ಲಿ ಸಾಧಿಸುವ ಅವಕಾಶಗಳು ಸಿಕ್ಕಾಗ ಅದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಿ. ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳು ರೆಡ್‌ಕ್ರಾಸ್ ಸಂಸ್ಥೆಯಿಂದ ಇನ್ನಷ್ಟ್ಟು ಮೂಡಿಬರಲಿ ಎಂದರು.
ಕಾರ್ಯಾಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿ, ರೆಡ್‌ಕ್ರಾಸ್ ಬೆಳೆದು ಬಂದ ರೀತಿ ಅದರ ನೀತಿ, ನಿಯಮ ಹಾಗೂ ಚರಿತ್ರೆಯನ್ನು ವಿದ್ಯಾರ್ಥಿಗಳಿಗೆ ತಿಳಿಸುವ, ಹಾಗೂ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವವನ್ನು ಮೂಡಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ಯುವ ರೆಡ್ ಕ್ರಾಸ್‌ನ ಹಿರಿಯ ಸದಸ್ಯ ಅಭಿಜಿತ್ ಟಿ ಎಲ್, ಘಟಕ ನಾಯಕರುಗಳಾದ ದೀಕ್ಷಿತ್ ಕೆ ಪಿ ಹಾಗೂ ನಳಿನಿ ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಲ್ಲವಿ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ತೇಜಸ್ ಸ್ವಾಗತಿಸಿ ಕುಮುದ ವಂದಿಸಿದರು. ರಶ್ಮಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.