ಕೆ.ವಿ.ಜಿ.ಐ.ಪಿ.ಎಸ್ ನಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ

Advt_Headding_Middle
Advt_Headding_Middle

 ಸುಳ್ಯದ ಕೆ.ವಿ.ಜಿ.ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಸೆ. ೫ರಂದು ಆದರ್ಶ ಶಿಕ್ಷಕ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಿದರು.

ರಾಧಾಕೃಷ್ಣನ್ ಅವರ ಭಾವಚಿತ್ರದೆದುರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಎಂಟನೇ ತರಗತಿಯ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು. ಶಾಲಾ ಉಪಪ್ರಾಚಾರ್ಯರಾದ ಶಿಲ್ಪಾ ಬಿದ್ದಪ್ಪ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಶಿಕ್ಷಕರಾದ ಗೀತಾಂಜಲಿಟಿ.ಜಿ, ಮೋನಾ ಮಬೆನ್, ಎಸ್.ಮಂಜುನಾಥ, ಮಮತಾ ಬಿ.ಎಸ್. ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಎಂಟನೇ ತರಗತಿಯ ಫಾತಿಮತ್ ರುಶ್ದಾ ಹಾಗೂ ಸೀಮಾ ಲಹರಿ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ಮೂಡಿಬಂದಿತು. ತದನಂತರ ವಿದ್ಯಾರ್ಥಿಗಳು ಶಿಕ್ಷಕರಿಗೆ ಮನರಂಜನಾ ಆಟಗಳನ್ನು ಆಯೋಜಿಸಿದ್ದರು. ಹತ್ತನೇ ತರಗತಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಆಯೋಜಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.