ಕುಂಡಡ್ಕ- ಮುಕ್ಕೂರು ಗಣೇಶೋತ್ಸವ ಕ್ರೀಡಾಕೂಟ

Advt_Headding_Middle
Advt_Headding_Middle

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಂಡಡ್ಕ – ಮುಕ್ಕೂರು ಇದರ ಆಶ್ರಯದಲ್ಲಿ ಗಣೇಶೋತ್ಸವ ಪ್ರಯಕ್ತ ವಿವಿಧ ಕ್ರೀಡಾಕೂಟ, ಸನ್ಮಾನ ಸಮಾರಂಭ ಸೆ. 9 ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷ ಕುಂಞಣ್ಣ ನಾಯ್ಕ್ ಅಡ್ಯತಕಂಡ ವಹಿಸಿದ್ದರು. ಸಭಾ ಕಾರ್ಯಕ್ರಮವನ್ನು ನಿವೃತ್ತ ಕಂದಾಯ ನಿರೀಕ್ಷಕ ದಾಮೋದರ ಗೌಡ ಕಂಡಿಪ್ಪಾಡಿ ಉದ್ಘಾಟಿಸಿದರು. ಶೈಕ್ಷಣಿಕ ಕ್ಷೆತ್ರದಲ್ಲಿ ಮಾಡಿದ ಸಾಧನೆಗಾಗಿ ನವಜೀತ್ ಜಾಲ್ಪಣೆ, ಅಕ್ಷಯ್ ಬೀರುಸಾಗು ಹಾಗೂ ಕ್ರೀಡಾ ಕ್ಷೇತ್ರದ ಸಾಧನೆಗಾಗಿ ವೀಕ್ಷಿತಾ ಕೂರೋಡಿ ಮತ್ತು ರಕ್ಷಿತಾ ಕೊಡಂಗೆಯವರನ್ನು ಸುಳ್ಯದ ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ಸನ್ಮಾನಿಸಿದರು. ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಮಹೇಶ್ ಪುಚ್ಚೆಪ್ಪಾಡಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಕವಯತ್ರಿ ಶ್ರೀಮತಿ ಅಶ್ವಿನಿ ಕೋಡಿಬೈಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪತ್ರಕರ್ತ ಕಿರಣ್ ಪ್ರಸಾದ್ ಕುಂಡಡ್ಕ ಸನ್ಮಾನ ಪತ್ರ ವಾದಿಸಿದರು. ಸಮಿತಿಯ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ರಮೇಶ್ ಕಾನಾವು ವಂದಿಸಿದರು. ಬೆಳಂದೂರು ಈಡನ್ ಗ್ಲೋಬಲ್ ಶಾಲಾ ಶಿಕ್ಷಕ ಶಶಿಕುಮಾರ್ ಮತ್ತು ರಕ್ಷಿತಾ ಮುಕ್ಕೂರು ಕಾರ್ಯಕ್ರಮ ನಿರೂಪಿಸಿದರು. ಪುರುಷರಿಗೆ, ಮಹಿಳೆಯರಿಗೆ ಮತ್ತು ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.