Breaking News

ಅ.15: ಸುಳ್ಯದಲ್ಲಿ ನಡೆಯಲಿರುವ ಭಜನೋತ್ಸವದ ಪೂರ್ವಭಾವಿ ಸಭೆ

Advt_Headding_Middle
Advt_Headding_Middle

ಸುಳ್ಯದಲ್ಲಿ ಅಕ್ಟೋಬರ್ 15 ರಂದು ನಡೆಯಲಿರುವ ಭಜನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಸೆ.9 ರಂದು ಧರ್ಮಸ್ಥಳ ಗ್ರಾ.ಯೋ.ಕಛೇರಿ ಸಭಾಂಗಣದಲ್ಲಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ವೇದಿಕೆಯಲ್ಲಿ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ. ಭಜನೋತ್ಸವ ಸಮಿತಿ ಅಧ್ಯಕ್ಷ ಬಾಲಕೃಷ್ಣ ಪುತ್ಯ, ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕುಮಾರ್ ರೈ ಮೇನಾಲ, ಭ.ಸ.ಕಾರ್ಯದರ್ಶಿ ಯತೀಶ್ ರೈ ದುಗ್ಗಲಡ್ಕ, ವಲಯ ಸಂಚಾಲಕ ತೀರ್ಥರಾಮ ಅಡ್ಕಬಳೆ, ಪದ್ಮನಾಭ ಜೈನ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಭಜನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಯನ್ನು ಬಿಡುಗಡೆ ಮಾಡಲಾಯಿತು. ಉಪ ಸಮಿತಿಗಳನ್ನು ರಚಿಸಲಾಯಿತು. ವಲಯ ಸಂಚಾಲಕರಿಗೆ ಜವಬ್ದಾರಿ ವಹಿಸಲಾಯಿತು.

ತಾ.ಭ ಪರಿಷತ್ ಪದಾಧಿಕಾರಿಗಳು ಹಾಗೂ ಭ.ಸಮಿತಿ ಸದಸ್ಯರು.ಯೋಜನೆಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ತಾಲೂಕಿನ ಭಜನಾ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಮಹಿಳಾ ಭಜನಾ ಮಂಡಳಿಯ ಸದಸ್ಯರು ಭಾಗವಹಿಸಿ ಸಲಹೆ ನೀಡಿದರು.

ಸಂಚಾಲಕ ದೀಪಕ್ ಕಾಯರ್ತೋಡಿ ಪ್ರಾರ್ಥಿಸಿದರು. ಮೇಲ್ವಿಚಾರಕ ಪ್ರಶಾಂತ್ ಸ್ವಾಗತಿಸಿದರು. ಬಾಲಕೃಷ್ಣ ಪುತ್ಯ ವಂದಿಸಿದರು. ಮೇಲ್ವಿಚಾರಕ ಶ್ರೀನಿವಾಸ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.