Breaking News

ಸೆ.13: ದುಗಲಡ್ಕ ದಲ್ಲಿ 18ನೇ ವರ್ಷದ ಶ್ರೀ ಗಣೇಶೋತ್ಸವ

Advt_Headding_Middle
Advt_Headding_Middle


ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ದುಗಲಡ್ಕ ಇದರ ಆಶ್ರಯದಲ್ಲಿ ೧೮ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.೧೩ರಂದು ದುಗಲಡ್ಕ ಅಯ್ಯಪ್ಪ ಭಜನಾ ಮಂದಿರದ ವಠಾರದಲ್ಲಿ ನಡೆಯಲಿದೆ. ಬೆಳಿಗ್ಗೆ ಗಂಟೆ ೬ ಕ್ಕೆ ಧ್ವಜಾರೋಹಣ, ಸ್ಥಳ ಶುದ್ಧಿ, ಗಣಪತಿ ಪ್ರತಿಷ್ಠೆ, ಗಣಪತಿ ಹವನ, ಮಕ್ಕಳಿಗೆ ಅಕ್ಷರಾಭ್ಯಾಸ, ಭಜನಾ ಕಾರ್ಯ ಕ್ರಮ, ಮಧ್ಯಾಹ್ನ ೧೨.೩೦ ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.

ಅಪರಾಹ್ನ ಗಂಟೆ ೨ ರಿಂದ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಒಂದು ನಿಮಿಷದ ವಿವಿಧ ಸ್ಪರ್ಧೆ ಗಳು, ಸಂಜೆ ಧಾರ್ಮಿಕ ಸಭಾ ಕಾರ್ಯ ಕ್ರಮ- ಶ್ರೀ ದೇವಿ ನಾಗರಾಜ್ ಭಟ್ ಸುಳ್ಯ ರವರಿಂದ ಧಾರ್ಮಿಕ ಉಪನ್ಯಾಸ ನಡೆಯಲಿದೆ. ನ.ಪಂ.ಅಧ್ಯಕ್ಷೆ ಶೀಲಾವತಿ ಮಾಧವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಂಜೆ ೬ ಕ್ಕೆ ಮಹಾಪೂಜೆ ಪ್ರಸಾದ ವಿತರಣೆ ಬಳಿಕ ಶ್ರೀ ಗಣೇಶನ ವೈಭವದ ಶೋಭಾಯಾತ್ರೆ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.