Breaking News

ದೇವಚಳ್ಳ ಗ್ರಾ.ಪಂ ಗ್ರಂಥಾಲಯ ನೂತನ ಕಟ್ಟಡ ಉದ್ಘಾಟನೆ

Advt_Headding_Middle
Advt_Headding_Middle

ದೇವಚಳ್ಳ ಗ್ರಾಮ ಪಂಚಾಯತ್‌ನ ಗ್ರಂಥಾಲಯದ ನೂತನ ಕಟ್ಟಡ ಸೆ. 10 ರಂದು ಉದ್ಘಾಟನೆಗೊಂಡಿತು. ನೂತನ ಕಟ್ಟಡವನ್ನು ಸುಳ್ಯ ತಾಲ್ಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು.

ದೀಪ ಬೆಳಗಿಸುವ ಮೂಲಕ ಶಾಸಕ ಅಂಗಾರ ಕೊಠಡಿಯನ್ನು ಉದ್ಘಾಟಿಸಿದರು. ನಂತರ ಸಭಾ ಕಾರ್ಯಕ್ರಮ ನಡೆದಿದ್ದು ದೇವಚಳ್ಳ ಗ್ರಾ.ಪಂ ಅಧ್ಯಕ್ಷ ದಿವಾಕರ ಮುಂಡೋಡಿ ಅಧ್ಯಕ್ಷತೆ ವಹಿಸಿದ್ದರು. 

ವೇದಿಕೆಯಲ್ಲಿ ಶಾಸಕ ಅಂಗಾರ, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ ಸದಸ್ಯರಾದ ಆಶಾ ತಿಮ್ಮಪ್ಪ, ಹರೀಶ್ ಕಂಜಿಪಿಲಿ, ತಾ.ಪಂ ಸದಸ್ಯರಾದ ಯಶೋದಾ ಬಾಳೆಗುಡ್ಡೆ, ಮುಖ್ಯ ಗ್ರಂಥಾಲಯ ಅಧಿಕಾರಿ ಮಮತಾ ರೈ, ದೇವಚಳ್ಳ ಗ್ರಾಮ ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ರಾಮ್ ಕಣೆಮರಡ್ಕ ಗ್ರಾ.ಪಂ ಉಪಾಧ್ಯಕ್ಷೆ ಭುವನೇಶ್ವರಿ, ಗ್ರಾ.ಪಂ ಸದಸ್ಯರುಗಳು ಉಪಸ್ಥಿತರಿದ್ದರು. 

ದಿವಾಕರ ಮುಂಡೋಡಿ ಸ್ವಾಗತಿಸಿ, ಶೈಲೇಶ್ ಅಂಬೆಕಲ್ಲು ವಂದಿಸಿದರು. ಕೃಷ್ಣಯ್ಯ ಮೂಲೆತೋಟ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.