Breaking News

ನಾಗಪಟ್ಟಣ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Advt_Headding_Middle
Advt_Headding_Middle

 

ನಾಗಪಟ್ಟಣ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರದ ಸಪ್ತಾಹ ಬಾಲವಿಕಾಸ ಸಮಿತಿ ಸಭೆ ಮತ್ತು ಬೇಟಿ ಬಚಾವೋ, ಬೇಟಿ ಪಡಾವೋ ಅರಿವು ಕಾರ್ಯಕ್ರಮವನ್ನು ಸೆ.14 ರಂದು ನಡೆಸಲಾಯಿತು.

ಬಾಲವಿಕಾಸ ಸಮಿತಿ ಅಧ್ಯಕ್ಷೆ ವಿಶಾಲಾಕ್ಷಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಡ್ಡಡ್ಕ ಆಶಾ ಕಾರ್ಯಕರ್ತೆ ಶ್ರೀಮತಿ ಸರಸ್ವತಿ ಪೌಷ್ಠಿಕ ಆಹಾರ, ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು. ಶಿಶು ಅಭಿವೃದ್ಧಿ ಯೋಜನೆ ಅರಂತೋಡು ವಲಯದ ಮೇಲ್ವಿಚಾರಕಿ ಶ್ರೀಮತಿ ರವಿಶ್ರೀ ಮೇಡಂರವರು ಮಾತೃಪೂರ್ಣ, ಮಾತೃವಂದನಾ, ಬೇಟಿ ಬಚಾವೋ ಬೇಟಿ ಪಡಾವೋ ಅರಿವು ಕಾರ್ಯಕ್ರಮದ ಬಗ್ಗೆ, ಹೆಣ್ಣುಮಕ್ಕಳ ಶಿಕ್ಷಣಕ್ಕೆ ಒತ್ತುಕೊಡುವ ಬಗ್ಗೆ ಸವಿವರ ಮಾಹಿತಿ ನೀಡಿದರು. ಶಾಲೆ ಬಿಟ್ಟ ಮಕ್ಕಳು ಮತ್ತು ಗೈರು ಹಾಜರಿಯಾಗುವ ಬಗ್ಗೆ ಕ್ರಮ ವಹಿಸುವಂತೆ ಪೋಷಕರಿಗೆ ಶ್ರೀಮತಿ ಪುಷ್ಪಾ ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿದರು.

ಮಕ್ಕಳ ಪೋಷಕರಾದ ಶ್ರೀಮತಿ ರೇವತಿ ಆನಂದ ಇವರು ಅಂಗನವಾಡಿ ಕೇಂದ್ರಕ್ಕೆ ಸ್ಟೀಲ್ ಪಾತ್ರೆಗಳನ್ನು ಕೊಡುಗೆಯಾಗಿ ನೀಡಿದರು. ಮಕ್ಕಳ ತಾಯಂದಿರು, ಗರ್ಭಿಣಿಯರು ಹಾಜರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲತಾ ನಾಗಪಟ್ಟಣ ಇವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಲಲಿತ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.