ಗುತ್ತಿಗಾರು ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Advt_Headding_Middle
Advt_Headding_Middle

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುತ್ತಿಗಾರು ಲಯನ್ಸ್ ಕ್ಲಬ್‌ನ ಸದಸ್ಯರು ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಲಯನ್ಸ್ ಸೇವಾ ಭವನದಲ್ಲಿ ನಡೆಯಿತು.

ಗುತ್ತಿಗಾರು ಲಯನ್ಸ್ ಕ್ಲಬ್‌ನ ಅಧ್ಯಕ್ಷ ಬಾಲಕೃಷ್ಣ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪನ್ಯಾಸಕ ವೆಂಕಪ್ಪ ಕೇನಾಜೆ ಶಿಕ್ಷಕ ದಿನಾಚರಣೆಯ ಬಗ್ಗೆ ಮಾಹಿತಿ ನೀಡಿದರು. ನಡುಗಲ್ಲು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವಸಂತಿ ಇವರನ್ನು ಫಲಪುಷ್ಪ ಕಾಣಿಕೆ ನೀಡಿ ಶಾಲು ಹೊದಿಸಿ ಸನ್ಮಾನಿಸಲಾಯಿತು.

ಲ. ಸರೋಜಿನಿ ಗಂಗಯ್ಯ, ನಿಕಟ ಪೂರ್ವಾಧ್ಯಕ್ಷ ಲ. ಎಂ.ಡಿ ವಿಜಯ ಕುಮಾರ್, ಖಾಜಾಂಜಿ ಲ. ಕುಶಾಲಪ್ಪ.ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕ್ಲಬ್‌ನ ಎಲ್ಲಾ ಸದಸ್ಯರು ಹಾಜರಿದ್ದರು. ಇದೇ ಸಂದರ್ಭದಲ್ಲಿ ಕ್ಲಬ್‌ನ ವತಿಯಿಂದ ಅತಿವೃಷ್ಟಿಯಿಂದಾಗಿ ಸಂಕಷ್ಟಕ್ಕೀಡಾದ ಹೂವಪ್ಪ ನಡುಗಲ್ಲು ಇವರಿಗೆ ಅಕ್ಕಿ ವಿತರಣೆ ಮಾಡಲಾಯ್ತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.