ಪ್ರಗತಿ ವಿದ್ಯಾಸಂಸ್ಥೆ ಬೆಳ್ಳಿಹಬ್ಬ: ಸಮಾಲೋಚನಾ ಸಭೆ

Advt_Headding_Middle
Advt_Headding_Middle

ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ೨೫ನೇ ವರ್ಷಾಚರಣೆ ಪ್ರಯುಕ್ತ ಬೆಳ್ಳಿಹಬ್ಬ ಸಮಿತಿ ಮತ್ತು ವಿವಿಧ ಸಮಿತಿಗಳ ಸಮಾಲೋಚನೆ ಸಭೆಯು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಜಗನ್ನಾಥ ರೈ ನುಳಿಯಾಲುರವರ ಅಧ್ಯಕ್ಷತೆಯಲ್ಲಿ ಅ.೨ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. 

ವೇದಿಕೆಯಲ್ಲಿ ಶಾಲಾ ಸಂಚಾಲಕ ಜಯಸೂರ‍್ಯ ರೈ ಮಾದೋರಿ, ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ರಮೇಶ್ ಭಟ್, ಉಪಾಧ್ಯಕ್ಷರುಗಳಾದ ಸೌಮ್ಯಲಕ್ಷ್ಮಿ, ರಮಾನಂದ ರೈ ಪೊಳೆಂಜ, ಉಮೇಶ್ ಕೆ.ಎಂ.ಬಿ, ಗೌರವಾಧ್ಯಕ್ಷ ಡಾ. ಉದಯಕುಮಾರ್, ಶಿಕ್ಷಕ-ರಕ್ಷಕ ಸಂಘದ ಗೌರವಾಧ್ಯಕ್ಷ ಎಂಜಾರು ಪದ್ಮನಾಭ ರೈ, ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಪ್ರಧಾನ ಕಾರ್ಯದರ್ಶಿ ಸುಜಿತ್ ರೈ ಪಟ್ಟೆ ಎಣ್ಮೂರು, ಕೋಶಾಧಿಕಾರಿ ಜನಾರ್ಧನ ಆಚಾರ್ಯ, ಡಾ.ಸಂಧ್ಯಾ ಉದಯಕುಮಾರ್, ಹಿರಿಯ ವಿದ್ಯಾರ್ಥಿಸಂಘದ ಅಧ್ಯಕ್ಷ ಜಗನ್ನಾಥ್ ರೈ, ಕನ್ನಡ ಮಾಧ್ಯಮದ ಮುಖ್ಯ ಗುರುಗಳಾದ ಶ್ರೀಮತಿ ಸರಸ್ವತಿ ಎಂ., ಆಂಗ್ಲ ಮಾಧ್ಯಮದ ಮುಖ್ಯ ಗುರುಗಳಾದ ಗಿರಿಶಂಕರ ಸುಲಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ಬೆಳ್ಳಿಹಬ್ಬ ಸಮಿತಿಯ ವಿವಿಧ ಪದಾಧಿಕಾರಿಗಳು, ವಿವಿಧ ಸಮಿತಿಯ ಪದಾಧಿಕಾರಿಗಳು, ವಿವಿಧ ಸಮಿತಿಯ ಸಂಚಾಲಕರು, ಸಕ್ರಿಯ ಸದಸ್ಯರು, ಶಿಕ್ಷಕ ವೃಂದ, ಶಿಕ್ಷಕೇತರ ವೃಂದ ಉಪಸ್ಥಿತರಿದ್ದರು. 

ಶಿಕ್ಷಕ ವೃಂದ ಮತ್ತು ಹಿರಿಯ ವಿದ್ಯಾರ್ಥಿಗಳ ಪೋಷಕರು ವಾಗ್ದಾಣ ಮಾಡಿದ ಹಣವನ್ನು ಬೆಳ್ಳಿ ಸಮಿತಿ ಅಧ್ಯಕ್ಷರಿಗೆ ಈ ಸಂದರ್ಭದಲ್ಲಿ ಹಸ್ತಾಂತರಿಸಿದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.