ಗುತ್ತಿಗಾರು: ಸಾರ್ವಜನಿಕ ಉಚಿತ ದಂತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Advt_Headding_Middle
Advt_Headding_Middle

 ಗ್ರಾಮ ಪಂಚಾಯತ್ ಗುತ್ತಿಗಾರು ,ಡಾ| ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬೆಳ್ಳಾರೆ ಪೆರುವಾಜೆ ಇದರ ಸಮಾಜ ಕಾರ್ಯ ವಿಭಾಗ ,ಕೆ.ವಿ.ಜಿ .ದಂತ ವೈದ್ಯಕೀಯ ಮಹಾವಿದ್ಯಾಲಯ ಸುಳ್ಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು ಇದರ ಸಹಯೋಗದೊಂದಿಗೆ ಸಾರ್ವಜನಿಕ ಉಚಿತ ದಂತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವು ಅ.6 ರಂದು ಗ್ರಾ.ಪಂ ಸಭಾಭವನದಲ್ಲಿ ನಡೆಯಿತು.

ಅದ್ಯಕ್ಷತೆಯನ್ನು ಗ್ರಾ.ಪಂ ಗುತ್ತಿಗಾರು ಅಧ್ಯಕ್ಷರಾದ ಅಚ್ಚುತ ಗುತ್ತಿಗಾರು ವಹಿಸಿದ್ದರು. ಉದ್ಘಾಟನೆ ಯನ್ನು ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಬೆಳ್ಯಪ್ಪ ಗೌಡ ಕಡ್ತಲಕಜೆ ನೆರವೇರಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಕೆ.ವಿ.ಜಿ ಡೆಂಟಲ್ ಕಾಲೇಜು ಪಿ.ಆರ್.ಒ ಜಯಂತ ತಳೂರು ಆಗಮಿಸಿದ್ದರು.ಈ ಸಂದರ್ಭದಲ್ಲಿ ಗುತ್ತಿಗಾರು ಪ್ರಾ.ಆ.ಕೇಂದ್ರ ವೈದ್ಯಾಧಿಕಾರಿ ಡಾ.ಚೈತ್ರಭಾನು,ಡಾ.ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಪೆರುವಾಜೆ ಇದರ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕರಾದ ಕಿರಣ್ ಗುಡ್ಡೆಮನೆ ಉಪಸ್ಥಿತರಿದ್ದರು. ಸ್ವಾಗತ ಭಾಷಣವನ್ನು ಬಾಲಚಂದ್ರ .ಕೆ ವಂದನಾರ್ಪಣೆಯನ್ನು ಮಾಲತಿ .ಕೆ ,ವನಿತಾ ಹಾಗೂ ಪ್ರವೀಣ್ ಕುಮಾರ್ .ಜಿ ಸಹಕರಿಸಿದರು

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.