ಬೆಳ್ಳಾರೆ: ಮಾಸ್ತಿಕಟ್ಟೆ ಅಂಗನವಾಡಿ ಕೇಂದ್ರ ಉದ್ಘಾಟನೆ

Advt_Headding_Middle
Advt_Headding_Middle

ದ.ಕ.ಜಿ.ಪಂ,ತಾ..ಪಂ ಸುಳ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆ ಸುಳ್ಯ,ಗ್ರಾಮ ಪಂಚಾಯತ್ ಬೆಳ್ಳಾರೆ ಇದರ ವತಿಯಿಂದ ನೂತನವಾಗಿ ನಿರ್ಮಿಸಿದ ಮಾಸ್ತಿಕಟ್ಟೆ ಅಂಗನವಾಡಿ ಕೇಂದ್ರದ ಉದ್ಘಾಟನೆ ಅ.8 ರಂದು ನಡೆಯಿತು.

 

ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿ ಶುಭಹಾರೈಸಿದರು.
ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ ದೀಪಬೆಳಗಿಸಿದರು.
ಎ.ಪಿ.ಎಂ.ಸಿ ಸದಸ್ಯ ಅನಿಲ್ ರೈ ಪ್ರಸ್ತಾವಿಕ ಮಾತನಾಡಿದರು.

ವೇದಿಕೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ,ಸದಸ್ಯೆ ಶ್ರೀಮತಿ ರಾಜೀವಿ ಆರ್ ರೈ,ಬೆಳ್ಳಾರೆ ಶ್ರೀ ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನದ ವ್ಯ.ಸ.ಅಧ್ಯಕ್ಷ ಸುನಿಲ್ ರೈ ಪುಡ್ಕಜೆ,ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಸರಸ್ವತಿ,ಮೇಲ್ವಿಚಾರಕಿ ಶೈಲಜಾ,ಶ್ರೀಮತಿ ವಿಮಲಾ ರಂಗಯ್ಯ,ಗ್ರಾಮ ಪಂಚಾಯತ್ ಪಿ.ಡಿ.ಒ ಧನಂಜಯ,ಸದಸ್ಯರಾದ ತಾಲೂಕು ಪಂಚಾಯತ್ ಸದಸ್ಯೆ ನಳಿನಾಕ್ಷಿ,ಓವಿನ್ ಪಿಂಟೋ, ರೈ ತಂಬಿನಮಕ್ಕಿ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚಂದ್ರಶೇಖರ ಕಾಮತ್, ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಪೂರ್ಣಿಮ ಪಡ್ಪು, ಗ್ರಾ.ಪಂ ಉಪಾಧ್ಯಕ್ಷ ಮಹಮ್ಮದ್ ಮುಸ್ತಾಫ,ಮಾಜಿ ಉಪಾಧ್ಯಕ್ಷ ಎನ್.ಎಸ್.ಡಿ.ವಿಠಲದಾಸ್ ಉಪಸ್ಥಿತರಿದ್ದರು.ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಇಂದಿರ ವರದಿ ಮಂಡಿಸಿದರು. ಶಕುಂತಳಾ ನಾಗರಾಜ್ ಸ್ವಾಗತಿಸಿ,ಸಚಿನ್ ರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.