Breaking News

ಎನ್ನೆಂಸಿ: ಸ್ವಯಂಪ್ರೇರಿತ ರಕ್ತದಾನ ಶಿಬಿರ

Advt_Headding_Middle
Advt_Headding_Middle

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ಕೆವಿಜಿ ಪಾಲಿಟೆಕ್ನಿಕ್‌ನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ)ನ ಅಧ್ಯಕ್ಷ ಡಾ ಕೆ ವಿ ಚಿದಾನಂದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ರಕ್ತದಾನ ಶಿಬಿರ ಒಂದು ಮಾದರಿ ಕಾರ್ಯಕ್ರಮವಾಗಿದೆ. ಇನ್ನೊಂದು ಜೀವವನ್ನು ಉಳಿಸುವ ಅಭೂತಪೂರ್ವ ಕೆಲಸದಲ್ಲಿ ತಾವು ತೊಡಗಿಕೊಂಡಿದ್ದೀರಿ. ಮುಂದಿನ ದಿನಗಳಲ್ಲಿ ಅಗತ್ಯ ಬಿದ್ದಾಗ ರಕ್ತದಾನ ಮಾಡುವ ಮಹತ್ಕಾರ್ಯದಲ್ಲಿ ತೊಡಗಿಕೊಳ್ಳಿ ಎಂದರು.
ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ನ ಖಜಾಂಚಿ ಶೋಭಾ ಚಿದಾನಂದ, ಕಾರ್ಯ ನಿರ್ವಾಹಕ ನಿರ್ದೇಶಕ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ಸತ್ಯವತಿ, ಆಡಳಿತಾಧಿಕಾರಿ ಜಗದೀಶ್ ಅಡ್ತಲೆ, ಬ್ಲಡ್ ಬ್ಯಾಂಕ್ ಅಧಿಕಾರಿ ಡಾ. ಮಹಂತ ದೇವರು, ನೆಹರೂ ಮೆಮೋರಿಯಲ್ ಕಾಲೇಜು ಪ್ರಾಂಶುಪಾಲ ಡಾ. ಕೆ ಗಿರಿಧರ ಗೌಡ, ಕೆವಿಜಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಬಾಲಕೃಷ್ಣ ಬೊಳ್ಳೂರು, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಹಣಕಾಸು ಅಧಿಕಾರಿ ಧನಂಜಯ ಮದುವೆಗದ್ದೆ, ಕ್ಯಾಂಪಸ್ ವಿದ್ಯಾರ್ಥಿ ಕ್ಷೇiಪಾಲನಾಧಿಕಾರಿ ಜವರೇ ಗೌಡ, ಕೆವಿಜಿ ಪಾಲಿಟೆಕ್ನಿಕ್‌ನ ಎನ್ನೆಸ್ಸೆಸ್ ಅಧಿಕಾರಿ ಚಂದ್ರಶೇಖರ ಬಿಳಿನೆಲೆ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡಾ. ಪೂನಂ, ನಮ್ರತಾ, ಚಂದ್ರಶೇಖರ್, ನಿತಿನ್, ಉಮೇಶ್, ಮೀನಾಕ್ಷಿ ಶ್ರೀಧರ್, ಪ್ರೇಮಜ, ರಜತ್ ಅಡ್ಕಾರ್, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಿಬ್ಬಂದಿ ವರ್ಗ, ರೆಡ್‌ಕ್ರಾಸ್ ಸದಸ್ಯರು, ಪಾಲಿಟೆಕ್ನಿಕ್‌ನ ಎನ್ನೆಸ್ಸೆಸ್ ಸದಸ್ಯರು, ರಕ್ತದಾನಿಗಳು ಉಪಸ್ಥಿತರಿದ್ದರು. ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲಕ್ಕಿಂತ ಮಿಗಿಲಾದ ದಾನ ರಕ್ತದಾನ, ವಿದ್ಯಾರ್ಥಿಗಳು ಇದರ ಮಹತ್ವವನ್ನು ಅರಿತು ಅಗತ್ಯ ಬಿದ್ದಾಗ ರಕ್ತದಾನ ಮಾಡಿ ಜೀವ ಉಳಿಸುವ ಮಹತ್ಕಾರ್ಯದಲ್ಲಿ ತೊಡಗಿಕೊಳ್ಳಲಿ ಎನ್ನುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದೇವೆ ಎಂದರು. ರೆಡ್ ಕ್ರಾಸ್ ಸದಸ್ಯ ಗಣೇಶ್ ರಕ್ತದಾನ ಮಾಡುವ ಮೂಲಕ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಲಾಯಿತು. ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಸಂಗ್ರಹಿಸಿದ ೧೦೦ಜನ ರಕ್ತದಾನಿಗಳ ಪಟ್ಟಿಯನ್ನು ಕಾಲೇಜಿನ ಪ್ರಾಂಶುಪಾಲರು ಡಾ. ಕೆ ವಿ ಚಿದಾನಂದ ಅವರಿಗೆ ಹಸ್ತಾಂತರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.