ಅ.15 : ನಿಂತಿಕಲ್ಲಿನಲ್ಲಿ ಧರ್ಮಶ್ರೀ ಆರ್ಕೇಡ್ ಶುಭಾರಂಭ

Advt_Headding_Middle
Advt_Headding_Middle

ಬೆಳ್ಳಾರೆ ಕಾಮಧೇನು ಗ್ರೂಪ್ಸ್‌ನ ಮಾಲಕ ಎಂ.ಮಾಧವ ಗೌಡರವರು ನಿಂತಿಕಲ್ಲಿನಲ್ಲಿ ನೂತನವಾಗಿ ನಿರ್ಮಿಸಿದ ಧರ್ಮಶ್ರೀ ಆರ್ಕೇಡ್ ಇದರ ಶುಭಾರಂಭವು ಅ.15ರಂದು ನಡೆಯಲಿದೆ.
ಕರ್ನಾಟಕ ಸರಕಾರದ ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಿ.ಕೆ.ಶಿವಕುಮಾರ್‌ರವರು ಧರ್ಮಶ್ರೀ ಆರ್ಕೇಡ್ ನ್ನು ಉದ್ಘಾಟಿಸಲಿದ್ದಾರೆ.  ಕರ್ನಾಟಕ ಸರಕಾರದ ನಗರಾಭಿವೃದ್ಧಿ ,ವಸತಿ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಸಭಾಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶ್ರೀ ಲಕ್ಷ್ಮೀವೆಂಕಟರಮಣ ಕಲ್ಯಾಣ ಮಂಟಪವನ್ನು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ.  ಮಯೂರ ಗೋಲ್ಡ್ ಪ್ಯಾಲೇಸನ್ನು ಮಾಜಿ ಸಚಿವರಾದ ಬಿ.ರಮಾನಾಥ ರೈ ಉದ್ಘಾಟಿಸಲಿದ್ದಾರೆ. ಪುತ್ತೂರು ಜಿ.ಎಲ್. ಆಚಾರ್ಯ ಜ್ಯುವೆಲ್ಲರಿ ಮಾಲಕ ಬಲರಾಮ ಆಚಾರ್ಯ ದೀಪಬೆಳಗಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ,ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು,ಕೆ.ವಿ.ಜಿ.ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ,ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ಶ್ರೀಮತಿ ದಿವ್ಯಪ್ರಭಾ ಚಿಲ್ತಡ್ಕ,ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸೀತಾರಾಮ ರೈ ಸವಣೂರು,ಗೌಡ ವಿದ್ಯಾವರ್ದಕ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ,ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಶಶಿಧರ ರೈ ಬೊಲ್ಯೊಟ್ಟು, ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ, ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಎಂ.ಬಿ.ಸದಾಶಿವ,ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್,ರಾಮಕೃಷ್ಣ ಪ್ರೌಢ ಶಾಲೆ ಸಂಚಾಲಕ ಹೇಮನಾಥ ಶೆಟ್ಟಿ ಕಾವು, ಮಡಿಕೇರಿಯ ಉದ್ಯಮಿ ಹಾಗೂ ಸಪ್ತಗಿರಿ ಎಂಟರ್‌ಪ್ರೈಸಸ್ ಮಾಲಕ ಕುಶಾಲಪ್ಪ ಗೌಡ,ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಪುಷ್ಪಾವತಿ ಬಾಳಿಲ,ಎಣ್ಮೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಾನಕಿ ಅಲೆಂಗಾರ.ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಗೌರವ ಉಪಸ್ಥಿತರಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ,ಕೆ.ಪಿ.ಸಿ.ಸಿ.ಸದಸ್ಯ ಎಂ.ವೆಂಕಪ್ಪ ಗೌಡ,ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶುಭದಾ ರೈ,ತಾಲೂಕು ಪಂಚಾಯತ್ ಸದಸ್ಯ ಗಫೂರ್,ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಕರಿಕ್ಕಳ, ಎಣ್ಮೂರು ಕೋಟಿ ಚೆನ್ನಯ ಗರಡಿ ಅಧ್ಯಕ್ಷ ರಾಮಕೃಷ್ಣ ಶೆಟ್ಟಿ ಕಟ್ಟಬೀಡು,ಜ್ಞಾನಗಂಗಾ ಪಬ್ಲಿಕ್ ಸ್ಕೂಲ್ ಸಂಚಾಲಕ ಎಂ.ಪಿ.ಉಮೇಶ್,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಶೇಖರ ಕಾಮತ್,ಎ.ಪಿ.ಎಂ.ಸಿ.ಸದಸ್ಯ ಸಂತೋಷ್ ಜಾಕೆ,ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ,ಜನತಾ ಬಜಾರ್ ಮಾಜಿ ಅಧ್ಯಕ್ಷ ಪ್ರಸನ್ನ ಭಟ್, ರೋಟರಿ ಕ್ಲಬ್ ಅಧ್ಯಕ್ಷ ಎ.ಕೆ.ಮಣಿಯಾಣಿ, ಬೆಳ್ಳಾರೆ ವಾಣಿಜ್ಯ ವರ್ತಕ ಕೈಗಾರಿಕಾ ಸಂಘದ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಶೆಟ್ಟಿ, ರಾಜೇಶ್ ಮಣಿಕ್ಕಾರ, ಎಣ್ಮೂರು ಸೀತಾರಾಮಾಂಜನೇಯ ಸೇವಾ ಪ್ರತಿಷ್ಠಾನದ ಅಧ್ಯಕ್ಷ ರಘುನಾಥ ರೈ ಉಪಸ್ಥಿತರಿರುವರು ಎಂದು ಎಂ.ಮಾಧವ ಗೌಡರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.