Breaking News

ಕನಕಮಜಲು ಗ್ರಾಮ ಅರಣ್ಯ ಸಮಿತಿ ಮಹಾಸಭೆ

Advt_Headding_Middle
Advt_Headding_Middle

ಕನಕಮಜಲು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆಯು ಕನಕಮಜಲಿನ ಶ್ರೀ ಆತ್ಮಾರಾಮ ಸಭಾಭವನದಲ್ಲಿ ಅ.11ರಂದು ಜರುಗಿತು.


ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಚಂದ್ರಶೇಖರ ಕನಕಮಜಲು ಅಧ್ಯಕ್ಷತೆ ವಹಿಸಿದ್ದರು. ಕನಕಮಜಲು ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಜಯಲತಾ ಗಬ್ಬಲಡ್ಕ ಕಾರ್ಯಕ್ರಮವನ್ನು ಉದ್ಘಾಟಿಸಿದರು .

ಕನಕಮಜಲು ಆತ್ಮಾರಾಮ ಭಜನಾ ಮಂದಿರದ ಅಧ್ಯಕ್ಷ ಜಗನ್ನಾಥ ಕಾಪಿಲ ಹಾಗೂ ಪಾಣಾಜೆ ಉಪ ವಲಯಾರಣ್ಯಾಧಿಕಾರಿ ಲೋಕೇಶ್ ಎಸ್.ಎನ್., ತಾ.ಪಂ.ಸದಸ್ಯ ತೀರ್ಥರಾಮ ಜಾಲ್ಸೂರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಉಪ ವಲಯ ಅರಣ್ಯ ಅಧಿಕಾರಿ, ಸಂಘದ ಕಾರ್ಯದರ್ಶಿ ಯೋಗೀಶ್ ಜಿ.ಸಿ. ವಾರ್ಷಿಕ ವರದಿ ವಾಚಿಸಿದರು. ಈ ಸಂದರ್ಭದಲ್ಲಿ ಜಾಲ್ಸೂರು ಹಾಗೂ ಕನಕಮಜಲಿನಲ್ಲಿ ಅರಣ್ಯ ವೀಕ್ಷಕರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿ ಕೌಡಿಚಾರಿಗೆ ವರ್ಗಾವಣೆಗೊಂಡ ದೇವಪ್ಪ ನಾಯ್ಕ ಅವರನ್ನು ಗ್ರಾಮ ಅರಣ್ಯ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ಸಭೆಯಲ್ಲಿ ಗ್ರಾಮ ಅರಣ್ಯ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅರಣ್ಯ ರಕ್ಷಕ ದಿನೇಶ್ ದೇವಾಡಿಗ ಸ್ವಾಗತಿಸಿ, ಯೋಗೀಶ್ ವಂದಿಸಿದರು. ಅರಣ್ಯ ರಕ್ಷಕ ವೆಂಕಟೇಶ್ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.