ಸುಳ್ಯದಲ್ಲಿ ಭಜನೋತ್ಸವ, ನಗರದಲ್ಲಿ ಭಜನಾ ಮೆರವಣಿಗೆ

Advt_Headding_Middle
Advt_Headding_Middle

ಸುಳ್ಯ ತಾಲೂಕು ಭಜನಾ ಪರಿಷತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜನ ಜಾಗೃತಿ ವೇದಿಕೆ ಮತ್ತು ತಾಲೂಕಿನ ಸಮಸ್ತ ಭಜನಾ ಮಂಡಳಿಗಳ ಸಹಯೋಗದಲ್ಲಿ ಸುಳ್ಯದಲ್ಲಿ ಇಂದು ಭಜನೋತ್ಸವ ನಡೆಯುತ್ತಿದ್ದು, ಇದಕ್ಕೆ ಪೂರ್ವಭಾವಿಯಾಗಿ ಶಾಸ್ತ್ರೀ ವೃತ್ತದಿಂದ ಭಜನಾ ಮೆರವಣಿಗೆ ನಡೆಯಿತು.
ಹಲವು ಭಜನಾ ಮಂಡಳಿಗಳ ಸದಸ್ಯರು ಭಜನೆಗಳನ್ನು ಹಾಡುತ್ತಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ಭಜನಾ ಪರಿಷತ್ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ಕಾರ್ಯದರ್ಶಿ ಬಾಲಕೃಷ್ಣ ಪುತ್ಯ, ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ಜನ ಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ರೈ ಮೇನಾಲ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಶಾರಾಂದಾಬ ಸೇವಾ ಸಮಿತಿ ಅಧ್ಯಕ್ಷ ರಾಜು ಪಂಡಿತ್, ಸುರೇಶ್ ಕಣೆಮರಡ್ಕ, ಬೂಡು ರಾಧಾಕೃಷ್ಣ ರೈ, ಮಹೇಶ್ ಬೆಟ್ಟಂಪ್ಪಾಡಿ, ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.