Breaking News

ಎನ್ನೆಂಸಿ: ಆರೋಗ್ಯ ಜಾಗೃತಿ ಕಾರ್ಯಕ್ರಮ

Advt_Headding_Middle
Advt_Headding_Middle

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವತಿಯಿಂದಜಾರೋಗ್ಯ ಜಾಗೃತಿ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕೆ ವಿ ಜಿ ನರ್ಸಿಂಗ್ ಇನ್ಸ್ಟಿಟ್ಯೂಟಿನ ಉಪಪ್ರಾಂಶುಪಾಲೆ ಭಾಗೀರಥಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಆರೋಗ್ಯವೇ ಭಾಗ್ಯ, ಅದಕ್ಕಿಂತ ದೊಡ್ಡ ಸಂಪತ್ತು ಇನ್ನೊಂದಿಲ್ಲ, ಧನವನ್ನು ಕಳೆದುಕೊಂಡರೆ ಏನನ್ನು ಕಳೆದುಕೊಂಡಂತಾಗುವುದಿಲ್ಲ ಆದರೆ ಆರೋಗ್ಯವನ್ನು ಕಳೆದುಕೊಂಡರೆ ಎಲ್ಲಾ ಸಂಪತ್ತನ್ನು ಕಳೆದುಕೊಂಡಂತೆ ಎಂದರಲ್ಲದೇ ಮಹಿಳೆಯರ ಆರೋಗ್ಯ, ಸಮಾಜದಲ್ಲಿ ಅವರ ಪಾತ್ರ, ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಂದಲೇ ಆಯೋಜನೆಗೊಂಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಸಿಂಚನ ವೈ ಎಸ್ ವಹಿಸಿದ್ದರು. ಕಾರ್ಯಕ್ರಮದ ಆಯೋಜಕಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಚಿತ್ರಲೇಖಾ ಕೆ ಎಸ್ ಹಾಗೂ ಕಾಲೇಜಿನ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಕಲಾ ವಿಭಾಗದ ಮುಖ್ಯಸ್ಥ ತಿಪ್ಪೇಸ್ವಾಮಿ ಡಿ ಎಚ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂತಿಮ ಬಿ ಎ ವಿದ್ಯಾರ್ಥಿನಿಯರಾದ ಜಿ ಶಿಲ್ಪಾ ಸ್ವಾಗತಿಸಿ, ಡೀನಾ ಪಿ ಜಿ ವಂದಿಸಿದರು. ಮೋಕ್ಷಿತಾ ಎನ್ ವಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.