Breaking News

ಎನ್ನೆಂಸಿ: ಗಾಂಧಿ ಜಯಂತಿ ಮತ್ತು ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ

Advt_Headding_Middle
Advt_Headding_Middle

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಮಾಜ ಕಾರ್ಯ ವಿಭಾಗ ಮತ್ತು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಗಾಂಧಿ ಜಯಂತಿ ಆಚರಣೆ, ಸ್ವಚ್ಛತಾ ಕಾರ್ಯಕ್ರಮ ಹಾಗೂ ಮಾಹಿತಿ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶೈಲಜ ವಹಿಸಿದ್ದರು. ಉಬರಡ್ಕ ಮಿತ್ತೂರು ಕಿರಿಯ ಆರೋಗ್ಯ ಸಹಾಯಕಿ ರೇವತಿ ಆರೋಗ್ಯದ ಶುಚಿತ್ವದ ಬಗ್ಗೆ ಮಾಹಿತಿ ನೀಡಿದರು.

ಉಬರಡ್ಕ ಮಿತ್ತೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ ಆರ್ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಉದ್ದೇಶ ಮತ್ತು ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿದರು. ಉಬರಡ್ಕ ಮಿತ್ತೂರು ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕಿ ಶಾರದಾ ಡಿ ಶೆಟ್ಟಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಉಪನ್ಯಾಸಕಿ ಶೋಭಾ ಎ ಪ್ರಾಸ್ತಾವಿಕವಾಗಿ ಮಾತನಾಡಿದರು. ಯಶಸ್ವಿ ಸ್ವಾಗತಿಸಿ, ಪ್ರವೀಣ್ ವಂದಿಸಿದರು. ವೀಣಾ ಎಂ ಎಚ್ ಕಾರ್ಯಕ್ರಮ ನಿರೂಪಿಸಿದರು.

 

ಮಾಹಿತಿ ಕಾರ್ಯಕ್ರಮದ ನಂತರ ಉಬರಡ್ಕ ಗ್ರಾಮ ಪಂಚಾಯತ್‌ನ ಸುತ್ತಮುತ್ತಲು ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.