ಎನ್ನೆಂಸಿ: ಆಹಾರ ಮತ್ತು ಆರೋಗ್ಯ ಮಾಹಿತಿ ಕಾರ್ಯಾಗಾರ

Advt_Headding_Middle
Advt_Headding_Middle

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಮಾಜ ಕಾರ್ಯ ವಿಭಾಗ, ಇನ್ನರ್‌ವ್ಹೀಲ್ ಕ್ಲಬ್ ಸುಳ್ಯ, ಗ್ರಾಮ ಪಂಚಾಯತ್ ಕನಕಮಜಲು ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕನಕಮಜಲು ಇವುಗಳ ಸಹಯೋಗದಲ್ಲಿ ಆಹಾರ ಮತ್ತು ಆರೋಗ್ಯ ಮಾಹಿತಿ ಕಾರ್ಯಾಗಾರ ಶ್ರೀ ನರಿಯೂರು ರಾಮಣ್ಣಗೌಡ ಹಿರಿಯ ಪ್ರಾಥಮಿಕ ಶಾಲೆ ಕನಕಮಜಲಿನಲ್ಲಿ ಇತ್ತೀಚೆಗೆ ನಡೆಯಿತು. ಮಮತಾ ಸತೀಶ್ ಉದ್ಘಾಟಿಸಿದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನಕಮಜಲು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀಧರ ಕುತ್ಯಾಳ ವಹಿಸಿದ್ದರು. ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಡಾ. ಹರ್ಷಿತಾ ಎಂ ಆಹಾರ ಮತ್ತು ಆರೋಗ್ಯದ ಬಗ್ಗೆ ಮಾಹಿತಿ ನೀಡಿ ಆಯುರ್ವೇದದಲ್ಲಿ ಮಾಡಬಹುದಾದ ಸುಲಭ ಔಷಧಿಗಳ ಬಗ್ಗೆ ತಿಳಿಸಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕನಕಮಜಲು ಒಕ್ಕೂಟ ಇದರ ಅಧ್ಯಕ್ಷೆ ವಾರಿಜಾ ಕೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಾಲ್ಸೂರು ವಲಯದ ಮೇಲ್ವಿಚಾರಕ ಪ್ರಶಾಂತ್ ಮುಖ್ಯಅತಿಥಿಗಳಾಗಿ ಉಪಸ್ಥಿತರಿದ್ದರು. ಸಮಾಜಕಾರ್ಯ ವಿಭಾಗ ಮುಖ್ಯಸ್ಥೆ ಮಧುರಾ ಎಂ ಆರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಹೇಮಕಿರಣ ಕೆ ಎಂ ಸ್ವಾಗತಿಸಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಸುಮಿತ್ ಪಿ ಟಿ ವಂದಿಸಿದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು, ಇನ್ನರ್‌ವ್ಹೀಲ್ ಸದಸ್ಯರು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.