Breaking News

ನ,12: ಬೆಳ್ಳಾರೆಯಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಬೆಳ್ಳಾರೆ ಘಟ ಸಮಿತಿಯ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯ ದತ್ತ ವೃತ ಪೂಜೆ

Advt_Headding_Middle
Advt_Headding_Middle

ಬೆಳ್ಳಾರೆ ಒಡಿಯೂರು ಶ್ರೀ ಗ್ರಾಮವಿಕಾಸ ಹಾಗೂ ಸಾಮೂಹಿಕ ಶ್ರೀ ಸತ್ಯದತ್ತ ವೃತ ಪೂಜೆಯು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನ.12 ರಂದು ನಡೆಯಲಿದೆ.


ಬೆಳಿಗ್ಗೆ ಗಂಟೆ 9.00ಕ್ಕೆ ಸಾಮೂಹಿಕ ಪ್ರಾರ್ಥನೆ,ಶ್ರೀ ಸತ್ಯದತ್ತ ವೃತಪೂಜೆ ಆರಂಭಗೊಳ್ಳಲಿದೆ.ನಂತರ ಭಜನಾ ಕಾರ್ಯಕ್ರಮ ಒ.ಶ್ರೀ.ದತ್ತಗುರು ವಿ.ವಾ.ಸ್ವ‌.ಸ.ಸಂಘ ಕೂತ್ಕುಂಜದವರಿಂದ ನಡೆಯಲಿದೆ.
ನಂತರ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಒಡಿಯೂರಿನ ಶ್ರೀ ಗುರುದೇವದತ್ತ ಸಂಸ್ಥಾನಮ್ ನ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಒಡಿಯೂರು ಗ್ರಾಮ ವಿಕಾಸ ಯೋಜನೆಯ ಪ್ರಧಾನ ಸಂಚಾಲಕ ಟಿ.ತಾರಾನಾಥ ಕೊಟ್ಟಾರಿ ಮುನ್ನುಡಿ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ,ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಕುಂತಳಾ ನಾಗರಾಜ್,ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯ.ಸ.ಅಧ್ಯಕ್ಷ ಸುನಿಲ್ ರೈ ಪುಡ್ಕಜೆ,ಎಸ್.ಐ.ಈರಯ್ಯ,ತಾ.ಪಂ.ಸದಸ್ಯೆ ಶ್ರೀಮತಿ ನಳಿನಾಕ್ಷಿ,ಗ್ರಾಮ ಪಂಚಾಯತ್ ಸದಸ್ಯ ಎನ್.ಎಸ್.ಡಿ.ವಿಠಲದಾಸ್,ಹಿ.ಪ್ರಾ.ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಕೇಶವ ಭಾಗವಹಿಸಲಿದ್ದಾರೆ.
ನಾಟಿ ವೈದ್ಯೆ ಶ್ರೀಮತಿ ಸರಸ್ವತಿ ಕಾವಿನಮೂಲೆ,ಮಾಜಿ ಸೈನಿಕ ಎಲ್ಯಣ್ಣ ಕುಲಾಲ್,ಪೌರ ಕಾರ್ಮಿಕ ಸೀತಾರಾಮ ನೆಟ್ಟಾರುರವರನ್ನು ಸನ್ಮಾನಿಸಲಾಗುವುದು.ನಂತರ ಮದ್ಯಾಹ್ನ ಪ್ರಸಾದ ವಿತರಣೆ,ಬಳಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಬೆಳ್ಳಾರೆ ಶ್ರೀ ಗ್ರಾಮವಿಕಾಸ ಯೋಜನೆಯ ಘಟ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.