ಕೆ.ವಿ.ಜಿ.ಐ.ಪಿ.ಎಸ್‌ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Advt_Headding_Middle
Advt_Headding_Middle

ಸುಳ್ಯದ ಕೆ.ವಿ.ಜಿ. ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ನ.1ರದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ವಿದ್ಯಾರ್ಥಿಗಳು ಹಾಡಿದ ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪ್ರಾಚಾರ್ಯರಾದ ಸುನಿಲ್ ಕುಮಾರ್.ಕೆ.ಸಿ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಕನ್ನಡ ರಾಜ್ಯೋತ್ಸವದ ಆಚರಣೆಯ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ನಾಡಿನ ಕಲೆ ಸಂಸ್ಕೃತಿಯನ್ನು ಬಿಂಬಿಸುವ ನೃತ್ಯ ಹಾಗೂ ಗೀತೆಗಳನ್ನು ಪ್ರಸ್ತುತಪಡಿಸಿದರು. ಉಪನ್ಯಾಸಕ ಎಸ್.ಮಂಜುನಾಥ ಕನ್ನಡ ನಾಡು ನುಡಿಯನ್ನು ಕುರಿತಾದ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶಿಕ್ಷಕಿ ರಂಜಿತಾ ಸ್ವಾಗತಿಸಿ, ದೀಪಶ್ರೀ ವಂದಿಸಿದರು. ಮಮತಾ ಕಾರ್ಯಕ್ರಮ ನಿರೂಪಿಸಿದರು. ಉಪಪ್ರಾಚಾರ್ಯೆ ಶಿಲ್ಪಾ ಬಿದ್ದಪ್ಪ, ವಿದ್ಯಾರ್ಥಿ ಕ್ಷೇಮಾಧಿಕಾರಿ ವಿದ್ಯಾ ರಾವ್, ಆಡಳಿತಾತ್ಮಕ ಸಂಯೋಜಕಿ ಸುಜಾತಾ.ಕೆ ಹಾಗೂ ಎಲ್ಲ ಅಧ್ಯಾಪಕರೂ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.