Breaking News

ಸುಳ್ಯದಲ್ಲಿ ಅಖಿಲ ಭಾರತ 65 ನೇ ಸಹಕಾರ ಸಪ್ತಾಹ

Advt_Headding_Middle
Advt_Headding_Middle

ಸುಳ್ಯ ತಾಲೂಕು ಸಹಕಾರಿ ಯೂನಿಯನ್, ಸುಳ್ಯ ತಾಲೂಕು ಲ್ಯಾಂಪ್ ಸಹಕಾರ ಸಂಘ, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಲ ಬೆಂಗಳೂರು, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳುರು, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಮಂಗಳುರು ಇವುಗಳ ಸಂಯುಕ್ತ ಆಶ್ರಯದಲ್ಲಿ ಅಖಿಲ ಭಾರತ 65 ನೇ ಸಹಕಾರ ಸಪ್ತಾಹ -2018  ಕಾರ್ಯಕ್ರಮವು ನ.17ರಂದು ಸುಳ್ಯ ಅಂಬಟೆಡ್ಕದಲ್ಲಿರುವ ಗಿರಿದರ್ಶಿನಿ ಸಭಾಭವನದಲ್ಲಿ ನಡೆಯಿತು.


ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ಸುಳ್ಯ ಟಿಎಪಿಸಿಎಂಎಸ್ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ನೆರವೇರಿಸಿದರು.
ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಕ್ಯಾಂಪ್ಕೋ ಮಾಜಿ ನಿರ್ದೇಶಕ ರಾಧಾಕೃಷ್ಣ ಕೋಟೆ ವಿಶೇಷ ಭಾಷಣಗಾರರಾಗಿದ್ದರು. ಮುಖ್ಯ ಅತಿಥಿಗಳಾಗಿ ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್, ಸುಳ್ಯ ಭೂ ಬ್ಯಾಂಕ್ ಅಧ್ಯಕ್ಷ ಹರೀಶ್ ಕಂಜಿಪಿಲಿ ಭಾಗವಹಿಸಿದರು.

ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ದಿವಾಕರ ರೈ, ಸುಳ್ಯ ಲ್ಯಾಂಪ್ ಸಹಕಾರ ಸಂಘದ ಅಧ್ಯಕ್ಷ ಸೀತಾನಂದ ಬೇರ್ಪಡ್ಕ, ಸುಳ್ಯ ಎ.ಪಿ.ಎಂ.ಸಿ. ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ, ಕ್ಯಾಂಪ್ಕೊ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಮಂಜುನಾಥ ಆರ್. ಉಪಸ್ಥಿತರಿದ್ದರು.

ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷ ಹರೀಶ್ ರೈ ಉಬರಡ್ಕ, ಉಪಾಧ್ಯಕ್ಷ ವಿಷ್ಣು ಭಟ್ ಬಿ., ಕಾರ್ಯದರ್ಶಿ ವೆಂಕಟ್ರಮಣ ಮುಳ್ಯ, ಕೋಶಾಧಿಕಾರಿ ಪ್ರಭಾಕರ ನಾಯಕ್ ಬಿ, ಸೀತಾನಂದ ಬೇರ್ಪಡ್ಕ ಮೊದಲಾದವರು ವೇದಿಕೆಯಲ್ಲಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.