ನ. 25 : ಕುಕ್ಕುಜಡ್ಕದಲ್ಲಿ ಸಾಮೂಹಿಕ ಶ್ರೀ ಸತ್ಯದತ್ತ ಪೂಜೆ ಹಾಗೂ ವಾರ್ಷಿಕೋತ್ಸವ

Advt_Headding_Middle
Advt_Headding_Middle

ಒಡಿಯೂರು ಚಾರಿಟೇಬಲ್ ಟ್ರಸ್ಟ್ ಮತ್ತು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಸಂಚಾಲಿತ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕುಕ್ಕುಜಡ್ಕ ಘಟ ಸಮಿತಿಯ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯದತ್ತ ವೃತ ಪೂಜೆಯು ನ. ೨೫ರಂದು ಕುಕ್ಕುಜಡ್ಕ ದ.ಕ.ಜಿ.ಪ.ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಲಿರುವುದು.

ಅ. ೨-೩೦ರಿಂದ ಸಾಮೂಹಿಕ ಪ್ರಾರ್ಥನೆ ಮತ್ತು ಶ್ರೀ ಸತ್ಯದತ್ತ ವೃತಪೂಜೆ ಪ್ರಾರಂಭವಾಗಲಿರುವುದು ಬಳಿಕ ಶ್ರೀದೇವಿ ಬಳಗ ಚೊಕ್ಕಾಡಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ನಂತರ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿರುವುದು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.