ಕೆ.ವಿ.ಜಿ.ಐ.ಪಿ.ಎಸ್‌ನಲ್ಲಿ ಮಕ್ಕಳ ದಿನಾಚರಣೆ

Advt_Headding_Middle
Advt_Headding_Middle

ಸುಳ್ಯದ ಕೆ.ವಿ.ಜಿ. ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ನ.೧೪ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಿಕ್ಷಕರು ವಿದ್ಯಾರ್ಥಿಗಳಂತೆ ಹಾಡಿ, ಆಡಿ ಮಕ್ಕಳ ಮನರಂಜಿಸಿದರು. ಚಾಚಾ ನೆಹರೂಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಪ್ರಾಚಾರ್ಯರಾದ ಸುನಿಲ್ ಕುಮಾರ್.ಕೆ.ಸಿ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳ ದಿನಾಚರಣೆಯ ಕುರಿತು ಮಾತನಾಡಿ ಶುಭ ಹಾರೈಸಿದರು. ಉಪಪ್ರಾಚಾರ್ಯರಾದ ಶಿಲ್ಪಾ ಬಿದ್ದಪ್ಪ ಸ್ವಾಗತಿಸಿ ವಿದ್ಯಾರ್ಥಿ ಕ್ಷೇಮಾಧಿಕಾರಿ ವಿದ್ಯಾರಾವ್ ವಂದಿಸಿದರು. ಕುಸುಮ್.ಕೆ.ಜೆ. ಕಾರ್ಯಕ್ರಮನಿರೂಪಿಸಿದರು. ಆಡಳಿತಾತ್ಮಕ ಸಂಯೋಜಕಿ ಸುಜಾತಾ.ಕೆ ಹಾಗೂ ಎಲ್ಲ ಅಧ್ಯಾಪಕರೂ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಯಿತು.ಬಳಿಕ ವಿದ್ಯಾರ್ಥಿಗಳಿಗೆ ಮನರಂಜನಾ ಆಟಗಳನ್ನು ಆಯೋಜಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.