ಮಾಸ್ತಿಕಟ್ಟೆ : ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ, ಸನ್ಮಾನ

Advt_Headding_Middle
Advt_Headding_Middle

ಬೆಳ್ಳಾರೆ ಗ್ರಾಮದ ಮಾಸ್ತಿಕಟ್ಟೆ-ತಡಗಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ತಾಯಂದಿರ ವತಿಯಿಂದ ಅಂಗನವಾಡಿ ಶಿಕ್ಷಕಿ ಮತ್ತು ಮತ್ತು ಸಹಾಯಕಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಮಕ್ಕಳ ದಿನಾಚರಣೆ ಅಂಗವಾಗಿ ಅಂಗನವಾಡಿಯ ಪುಟಾಣಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ ಶಕುಂತಳಾ ನಾಗರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಅಂಗನವಾಡಿ ಶಿಕ್ಷಕಿ ಇಂದಿರಾ ಹಾಗೂ ಅಂಗನವಾಡಿ ಸಹಾಯಕಿ ಗುಲಾಬಿ ಇವರುಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸರಸ್ವತಿ ಸನ್ಮಾನಿಸಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಪೂರ್ಣೀಮಾ ಪಡ್ಪು ಸೇರಿದಂತೆ ಮಕ್ಕಳ ತಾಯಂದಿರು ಉಪಸ್ಥಿತರಿದ್ದರು. ಬೇಬಿ ಮತ್ತು ಪ್ರಿಯಾಂಕ ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.