ಸೈಂಟ್‌ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ಸಂಭ್ರಮ

Advt_Headding_Middle
Advt_Headding_Middle

ಮಕ್ಕಳ ದಿನಾಚರಣೆಯ ಪ್ರಯುಕ್ತ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ಸಂಭ್ರಮ ಕಾರ್ಯಕ್ರಮ ನ. ೧೪ರಂದು ನಡೆಯಿತು. ಶಿಕ್ಷಕ ಶಿವಾನಂದರವರ ಪ್ರಾರ್ಥನೆ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದರೆ| ಫಾ| ವಿನ್ಸೆಂಟ್ ಡಿ ಸೋಜಾರವರು ವಹಿಸಿಕೊಂಡು ಮಕ್ಕಳಿಗೆ ಶುಭಕೋರಿದರು. ಕಾರ್ಯಕ್ರಮದ ಮುಖ್ಯ ಅತಿಥಿ ಕು. ಕವನರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಶಾಲಾ ಮುಖ್ಯೋಪಾಧ್ಯಾಯಿನಿ ಸಿ| ಬಿನೋಮ, ಶಾಲಾ ಪೋಷಕ ಸಮಿತಿಯ ಅಧ್ಯಕ್ಷರು ಗುರುಪ್ರಸಾದ್ ರೈ ಹಾಗೂ ಶ್ರೀಮತಿ ರೇಖಾಯು.ಎಸ್, ಶಾಲಾ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು. ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆದವು. ಕಾರ್ಯಕ್ರಮವನ್ನು ಶಿಕ್ಷಕಿ ಅನಿತಾ ನಿರೂಪಿಸಿದರು. ಮುಖ್ಯೋಪಾಧ್ಯಾಯಿನಿ ಸಿ| ಬಿನೋಮ ಸ್ವಾಗತಿಸಿದರು. ವಿದ್ಯಾರ್ಥಿ ಚಿರಂತನ್ ಸಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.