Breaking News

ಅಜ್ಜಾವರ : ಬಿಜೆಪಿ ಕಾರ್ಯಕರ್ತರ ಸಭೆ

Advt_Headding_Middle
Advt_Headding_Middle

ಸಂಸದ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಪೇಜ್ ಪ್ರಮುಖರು ಹಾಗೂ ಪಕ್ಷದ ಕಾರ್ಯಕರ್ತರ ಸಭೆಯು ಅಜ್ಜಾವರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನ.15ರಂದು ಸಂಜೆ ನಡೆಯಿತು.

ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಸಂಸದ ಕಟೀಲ್ ಮಾಹಿತಿ ನೀಡಿದರು. ಮುಂದಿನ ೨೦೧೯ರ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯ ಕುರಿತು ಪೇಜ್ ಪ್ರಮುಖರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಸುಳ್ಯ ಮಂಡಲ ಬಿಜೆಪಿ ಪ್ರ.ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಹಿಂದುಳಿದ ಮೋರ್ಚಾದ ಜಿಲ್ಲಾಧ್ಯಕ್ಷ ಸುರೇಶ್ ಕಣಿಮರಡ್ಕ , ಮಾಜಿ. ಜಿ.ಪಂ. ಸದಸ್ಯ ನವೀನ್ ಕುಮಾರ್ ಮೇನಾಲ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಾಲ್ಸೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಉದಯಕುಮಾರ್ ಆಚಾರ್ ಮಂಡೆಕೋಲು, ಜಿ.ಪಂ.ಸದಸ್ಯೆ ಶ್ರೀಮತಿ ಪುಷ್ಪಾವತಿ ಬಾಳಿಲ ಸೇರಿದಂತೆ ಬಿಜೆಪಿ ಪೇಜ್ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.