ದುಗಲಡ್ಕ ಸರಕಾರಿ ಪ್ರೌಢಶಾಲೆಗೆ ಡಾ.ಕೆ.ವಿ.ಚಿದಾನಂದರಿಂದ ಸಮವಸ್ತ್ರ- ವಿತರಣೆ

Advt_Headding_Middle
Advt_Headding_Middle

ದುಗಲಡ್ಕ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸುಳ್ಯ ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದರು ಕೊಡುಗೆಯಾಗಿ ನೀಡಿದ ಸಮವಸ್ತ್ರದ ವಿತರಣೆ ನ. 17 ರಂದು ದುಗಲಡ್ಕ ಪ್ರೌಢಶಾಲೆಯಲ್ಲಿ ನಡೆಯಿತು.

 

ಸಮವಸ್ತ್ರ ವನ್ನು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನಿರ್ದೇಶಕ ಕೆ.ಸಿ.ಅಕ್ಷ ಯ್ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿ ಒಂದೇ ರೀತಿಯ ವಸ್ತ್ರದಂತೆ ವಿದ್ಯಾರ್ಥಿಗಳು ಜಾತಿ, ಧರ್ಮ, ಮೇಲು, ಕೀಳು ಭೇದವಿಲ್ಲದೆ ಎಲ್ಲರೂ ಒಂದು ಎಂಬ ಭಾವನೆಯಿಂದ ಇರಬೇಕು ಎಂದು ಹೇಳಿದರು.


 ಪ್ರಗತಿಪರ ಕೃಷಿಕರಾದ ಪುರುಷೋತ್ತಮ ಗೌಡ ಮಾಣಿಬೆಟ್ಟು ಕೆ.ಸಿ.ಅಕ್ಷಯ್ ರನ್ನು ಸನ್ಮಾನಿಸಿದರು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಮನಮೋಹನ ಕಲ್ಲುಗದ್ದೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಎ.ಯು.ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕರಾದ ಉನ್ನಿಕೃಷ್ಣನ್ ಸ್ವಾಗತಿಸಿ, ವೆಂಕಟ್ರಮಣ ಗೌಡ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.