ಗೂನಡ್ಕ ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ಮಿಲಾದ್ ಸ್ನೇಹ ಸಂಗಮ

Advt_Headding_Middle
Advt_Headding_Middle

ಗೂನಡ್ಕ ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ಮಿಲಾದ್ ಸ್ನೇಹ ಸಂಗಮ ಕಾರ್ಯಕ್ರಮವು ಗೂನಡ್ಕ ಬ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಿತು. ಸಂಪಾಜೆ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಮಾಜಿ ಅರಣ್ಯ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಆಗಮಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಈಸ್ಟರ್ನ್ ಮಾರ್ಕೆಟ್ ಚಯರ್‌ಮೆನ್ ಅಬ್ದುಲ್ ಗಫೂರ್, ಜೆ.ಡಿ.ಎಸ್. ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ, ಕೆಪಿಸಿಸಿ ಕಾರ್ಯದರ್ಶಿ ಎಂ. ವೆಂಕಪ್ಪ ಗೌಡ, ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ, ಸೀ ಫುಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಜಿ ಇಬ್ರಾಹಿಂ ಸೀಫುಡ್, ಸಂಪಾಜೆ ವರ್ತಕರ ಸಂಘದ ಅಧ್ಯಕ್ಷ ಯು.ಬಿ.ಚಕ್ರಪಾಣಿ, ಸಂಪಾಜೆ ಸಹಕಾರಿ ಸಂಘದ ನಿರ್ದೇಶಕ ಪಿ..ಎನ್. ಗಣಪತಿ ಭಟ್, ದ.ಕ.ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ನಿರ್ದೇಶಕ ಪಿ.ಎ.ಉಮ್ಮರ್ ಗೂನಡ್ಕ, ಯುವ ಉದ್ಯಮಿ ಇಕ್ಬಾಲ್ ಬೀಜದಕಟ್ಟೆ, ಕಾಂಗ್ರೆಸ್ ಮುಖಂಡ ಕಾವು ಹೇಮನಾಥ್ ಶೆಟ್ಟಿ, ಬಿಜೆಎಂ ಅಧ್ಯಕ್ಷ ಪಿಎ. ಅಬ್ದುಲ್ಲಾ ಕೊಪ್ಪತ್ತಕಜೆ ವೇದಿಕೆಯಲ್ಲಿದ್ದರು. ಗೂನಡ್ಕ ಬಿಜೆಎಂ ಖತೀಬ್ ಮಹಮ್ಮದ್ ಅಲೀ ಸಖಾಫಿ ಪ್ರಾರ್ಥನೆ ನೆರವೇರಿಸಿದರು.

ಸನ್ಮಾನ: ಸಮಾರಂಭದಲ್ಲಿ ಅಪಘಾತ ರಹಿತ ಬಸ್ ಚಾಲನೆಗಾಗಿ ರಾಜ್ಯ ಸರ್ಕಾರದಿಂದ ಬೆಳ್ಳಿಪದಕ ಪುರಸ್ಕೃತಗೊಂಡಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ ಕೆ,ಪಿ. ಮಹಮ್ಮದ್ ಕಲ್ಲುಗುಂಡಿ, ಗೂನಡ್ಕ ಶ್ರೀ ಶಾರದಾ ಅನುದಾನಿತ ಹಿ.ಪ್ರಾ.ಶಾಲೆಯ ಮುಖ್ಯೋಪಾಧ್ಯಾಯ ಹನುಮಂತಪ್ಪ ಜಿ., ಪ್ರತಿಭಾನ್ವಿತ ವಿದ್ಯಾರ್ಥಿ ನಿಹ್‌ಮತ್ತುಲ್ಲಾ ಇಸ್‌ಹಾಕ್‌ರನ್ನು ಸನ್ಮಾನಿಸಲಾಯಿತು. ಹಾಗೂ ಮಾಜಿ ಸಚಿವ ರಮಾನಾಥ ರೈ, ಐವನ್ ಡಿಸೋಜಾ, ಸೀಫುಡ್ ಇಬ್ರಾಹಿಂ, ಅಬ್ದುಲ್ ಗಫೂರ್ ಮತ್ತಿತರರನ್ನು ಗೌರವಿಸಲಾಯಿತು.


ಪ್ರತಿಭಾ ಪುರಸ್ಕಾರ, ಸಹಾಯಧನ:

ಸಮಾರಂಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ನಗದು ಪುರಸ್ಕಾರ, ಅಂಗವಿಕರಿಗೆ ಸಹಾಯಧನ ನೀಡಿ ಗೌರವಿಸಲಾಯಿತು. ಎಸ್.ಪಿ.ಎಸ್.ವಿದ್ಯಾರ್ಥಿಗಳ ಕೈಬರಹವನ್ನು ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದ ಸಂಘಟಕ, ಅಲ್ ಅಮೀನ್ ವೆಲ್ಫೇರ್ ಅಸೋಸಿಯೇಶನ್‌ನ ಅಧ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪಾಜೆ ಗ್ರಾ.ಪಂ. ಸದಸ್ಯ ಪಿ.ಕೆ.ಅಬುಸಾಲಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.