ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ರಾಜ್ಯದಲ್ಲಿಯೇ ಪ್ರಥಮ ಪ್ರಶಸ್ತಿ

Advt_Headding_Middle
Advt_Headding_Middle

ಶಿವಮೊಗ್ಗದಲ್ಲಿ ನ.೨೦,ರಂದು ಜರುಗಿದ ಕರ್ನಾಟಕ ರಾಜ್ಯ ೬೫ನೇ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎನ್.ಸಿ.ಡಿ.ಸಿ. ‘ರಿಜಿನಲ್ ಆವಾರ್ಡ್ ೨೦೧೮’ ಪ್ರಶಸ್ತಿ ಪ್ರಧಾನ ನಡೆಯಿತು. ಪಂಜ ಪ್ರಾ.ಕೃ.ಪ.ಸ.ಸಂಘದ ಸರ್ವತೋಮುಖ ಬೆಳವಣಿಗೆ ಮತ್ತು ಸೇವೆಯನ್ನು ಪರಿಗಣಿಸಿ (ಸರ್ಟಿಫಿಕೇಟ್ ಆಫ್ ಎಕ್ಸಲೆನ್ಸ್ )ರಾಜ್ಯದಲ್ಲಿಯೇ ಪ್ರಥಮ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪತ್ರ ಮತ್ತು ೨೫ ಸಾವಿರ ರೂ.ವಿನ ಚೆಕ್‌ನ್ನು ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ಸಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ್ ಪಲ್ಲೋಡಿ ಯರಿಗೆ ನೀಡಿ ಗೌರವಿಸಿದ್ದಾರೆ. ರಾಜ್ಯ ಸಹಕಾರ ಸಚಿವ ಬಂಡೆಪ್ಪ ಕಾಶಂಪುರ ಪ್ರಶಸ್ತಿ ಪ್ರಧಾನಗೈದರು. ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅದ್ಯಕ್ಷ ಮಂಜುನಾಥ್ ಗೌಡ ಸೇರಿದಂತೆ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪಂಜ ಪ್ರಾ,ಕೃ,, ಸ, ಸಂಘದ ಉಪಾಧ್ಯಕ್ಷ ಲೋಕೇಶ್ ಬರೆಮೇಲು, ನಿದೆಶಕರಾದ ಭಾಸ್ಕರ ಗೌಡ ಚಿದ್ಗಲ್ಲು, ವಾಚಣ್ಣ ಕೆರೆಮೂಲೆ, ಗಣೇಶ್ ಪೈ, ಸಿಬ್ಬಂದಿಗಳಾದ ಲೋಹಿತ್ ಎಣ್ಣೆಮಜಲು, ಆನಂದ ಗೌಡ,ಇನ್ನಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.