Breaking News

ಜಾಲ್ಸೂರು: ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಕೌದಿ ಕೌಶಲ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Advt_Headding_Middle
Advt_Headding_Middle

ವಿಜಯ ಬ್ಯಾಂಕ್ ಪ್ರವರ್ತಿತ ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ.) ಮಂಗಳೂರು ಹಾಗೂ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಇದರ ವತಿಯಿಂದ ಕೌದಿ ಕೌಶಲ್ಯ ತರಬೇತಿ ಕಾರ್ಯಕ್ರಮವು ಜಾಲ್ಸೂರು ಗ್ರಾಮದ ಕಾಳಂಮನೆಯ ಜಯಭಾರತಿ ನಿಲಯದಲ್ಲಿ ನ.೨೨ರಂದು ಜರುಗಿತು.

ಸುಳ್ಯ ವಿಜಯ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕ ನವೀನ್ ಜಿ.ಎನ್. ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಹಾರೈಸಿದರು. ಜಾಲ್ಸೂರು ವಿಜಯ ಗ್ರಾಮಾಭಿವೃದ್ದಿ ಸಮಿತಿಯ ಅಧ್ಯಕ್ಷ ಯಶ್ವಿತ್ ಕಾಳಂಮನೆ ಅಧ್ಯಕ್ಷತೆ ವಹಿಸಿದ್ದರು. ವಿ.ಆರ್.ಡಿ.ಎಫ್.ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಆಚಾರ್ಯ , ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮನೋರಮ ಮುಚ್ಚಾರ ಬಾಳುಗೋಡು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಾಲ್ಕೂರು ವಿಜಯ ಗ್ರಾಮಾಭಿವೃದ್ಧಿಯ ಕಾರ್ಯದರ್ಶಿ ದಿನೇಶ್ ಹಾಲೆಮಜಲು ಉಪಸ್ಥಿತರಿದ್ದರು. ಸಮಿತಿ ಸದಸ್ಯೆ ರಶ್ಮಿ ಕಾಳಂಮನೆ ಪ್ರಾರ್ಥಿಸಿದರು. ಜಾಲ್ಸೂರು ಸಮಿತಿ ಕಾರ್ಯದರ್ಶಿ ಶ್ರೀಮತಿ ತಿರುಮಲೇಶ್ವರಿ ಅಡ್ಕಾರು ಸ್ವಾಗತಿಸಿ, ಸಮಿತಿ ಸದಸ್ಯೆ ಶ್ರೀಮತಿ ಗೀತಾಗೋಪಿನಾಥ್ ಬೊಳುಬೈಲು ವಂದಿಸಿದರು. ಸಮಿತಿ ಸದಸ್ಯೆ ಶ್ರೀಮತಿ ವಿಜಯ ಗಂಗಾಧರ ಕಾಳಂಮನೆ ಕಾರ್ಯಕ್ರಮ ನಿರೂಪಿಸಿದರು.

೨ ತಿಂಗಳುಗಳ ಕಾಲ ಪ್ರತೀ ಆದಿತ್ಯವಾರ ಪೂ. ೧೦-೩೦ರಿಂದ ೧೨ ರ ವರೆಗೆ ತರಬೇತಿ ಕಾರ್ಯಾಗಾರ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.