ಕೆಎಸ್‌ಎಸ್ ಕಾಲೇಜಿನ ರಾ.ಸೇ.ಯೋ ಶಿಬಿರ ಉದ್ಘಾಟನೆ

Advt_Headding_Middle
Advt_Headding_Middle

ಉತ್ತಮ ಬದುಕು ರೂಪಿಸಲು ಎನ್‌ಎಸ್‌ಎಸ್ ಶಿಬಿರ ಸಹಕಾರಿ – ನಿತ್ಯಾನಂದ ಮುಂಡೋಡಿ

ವಿದ್ಯಾರ್ಥಿಗಳು ರಾ.ಷ್ಟ್ರೀಯ ಸೇವಾ ಯೋಜನೆಗಳಲ್ಲಿ ತೊಡಗಿಸಿಕೊಂಡಲ್ಲಿ ಅದು ಮುಂದಿನ ಜೀವನಕ್ಕೆ ಸಹಕಾರಿಯಾಗುತ್ತದೆ. ಮಾನವೀಯ ಸಂಬಂಧ ವೃದ್ಧಿ ಜತೆಗೆ ಪರಸ್ಪರ ಪ್ರೀತಿ, ವಿಶ್ವಾಸಗಳು ಬೆಳೆದು ಉತ್ತಮ ಜನಜೀವನಕ್ಕೆ ನಾಂದಿ ಹಾಡುತ್ತದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು.


ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಇದರ ವಾರ್ಷಿಕ ಸೇವಾ ಶಿಬಿರವನ್ನು ಐನಕಿದುವಿನ ದ.ಕಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೋ ರಂಗಯ್ಯ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜಿ.ಪಂ ಸದಸ್ಯೆ ಆಶಾ ತಿಮ್ಮಪ್ಪ, ಹರಿಹರ ಗ್ರಾ.ಪಂ ಅಧ್ಯಕ್ಷ ಹಿಮ್ಮತ್ ಕೆ.ಸಿ, ಶ್ರೀ ಹರಿಹರೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕಿಶೋರು ಕೂಜುಗೋಡು, ಗ್ರಾ.ಪಂ ಸದಸ್ಯ ನವೀನ್ ಕಟ್ರೆಮನೆ, ಪತ್ರಕರ್ತ ಬಾಲಕೃಷ್ಣ ಭೀಮಗುಳಿ, ಐನಕಿದು ಸ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ, ಎಸ್‌ಡಿಎಂಸಿ ಅಧ್ಯಕ್ಷ ಚಿನ್ನಮ್ಮ, ಕೆಎಸ್‌ಎಸ್ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮೋಹನದಾಸ್ ರೈ ಕುಕ್ಕೆ ದೇಗುಲದ ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಶಿವರಾಮ ರೈ, ಶಿಬಿರದ ಸಂಯೋಜಕ ಸತೀಶ್ ಕೂಜುಗೋಡು ಉಪಸ್ಥಿತರಿದ್ದರು.
ಶಿಬಿರಾಧಿಕಾರಿ ಪ್ರೋ ಶಿವಪ್ರಸಾದ್ ಎಸ್ ಪ್ರಸ್ತಾವನೆಗೈದು ಸ್ವಾಗತಿಸಿ, ಪ್ರೋ ಪುಷ್ಪಾ ಡಿ ವಂದಿಸಿದರು. ವಿದ್ಯಾರ್ಥಿನಿ ಶ್ರುತಿ ರೈ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.