Breaking News

ಡಿ. 1- 2 : ನಿಂತಿಕಲ್ಲು ಕೆ.ಎಸ್.ಗೌಡ ದಶವರ್ಷ ವೈಭವ

Advt_Headding_Middle
Advt_Headding_Middle

ನಿಂತಿಕಲ್ಲು ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಕೇಂದ್ರ, ಕೆ.ಎಸ್.ಗೌಡ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಇವುಗಳ ಸಂಯಕ್ತ ಆಶ್ರಯದಲ್ಲಿ ಡಿ. 1 ಮತ್ತು 2ರಂದು ದಶವರ್ಷ ವೈಭವ -2018  ಕಿನ್ನಿಕುಮ್ರಿ ಮೀನಾಕ್ಷಿ ಶೀನಪ್ಪ ಗೌಡ ರಂಗಮಂದಿರದಲ್ಲಿ ನಡೆಯಲಿದೆ.

ಡಿ. 1ರಂದು ಪೂ. 9- 3 ೦ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಧರ್ಮಣ್ಣ ನಾಯ್ಕರವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕ ಎಸ್.ಅಂಗಾರ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂ ಸಾದ್ವಿ ಮಾತನಂದಮಯೀ ಉಪಸ್ಥಿತರಿರುವರು. ಸವಣೂರು ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ವಸ್ತು ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ. ಕೆ.ಎಸ್.ಗೌಡ ಸಮೂಹ ವಿದ್ಯಾಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ಮೀನಾಕ್ಷಿ ಶೀನಪ್ಪ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಶ್ರೀಮತಿ ಕುಂಞಮ್ಮ,ತಾ.ಪಂ. ಸದಸ್ಯ ಅಬ್ದುಲ್ ಗಫೂರ್, ಕಲ್ಮಡ್ಕ ಗ್ರಾ.ಪಂ. ಸದಸ್ಯ ಲೋಕೇಶ್ ಆಕ್ರಿಕಟ್ಟೆ, ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿಚೆನ್ನಯ ಆದಿ ಬೈದೇರುಗಳ ಗರಡಿಯ ಆಡಳಿತ ಮೊಕ್ತೇಸರ ರಾಮಕೃಷ್ಣ ಶೆಟ್ಟಿ ಕಟ್ಟಬೀಡು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕ್ಕಳ, ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಕ್ಷಯ ಆಳ್ವ, ಬೆಳ್ಳಾರೆ ಎಸ್‌ಐ ಈರಯ್ಯ ಡಿ.ಎಸ್., ಕದ್ರಿ ಮಂಗಳೂರು ಐಟಿಐ ಕಾಲೇಜಿನ ಪ್ರಾಂಶುಪಾಲ ಗಿರಿಧರ ಸಾಲಿಯಾನ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಗಲಿಂಗಪ್ಪ, ಮೈಸೂರು ಬಾಲಕಿಯರ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಪಟ್ಟದ ಶಿವಕುಮಾರ್ ಭಾಗವಹಿಸಲಿದ್ದಾರೆ.

ಸಂಜೆ ಗಂಟೆ ೨.೦೦ರಿಂದ ಕೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ಶಾಲಾ ವಿದ್ಯಾರ್ಥಿಗಳಿಗೆ ,ಹಿರಿಯ ವಿದ್ಯಾರ್ಥಿಗಳಿಗೆ, ಪೋಷಕರಿಗೆ, ಅಧ್ಯಾಪಕರಿಗೆ ಮತ್ತು ಸಾರ್ವಜನಿಕರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ.
ಸಂಜೆ ಗಂಟೆ ೪.೦೦ ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ ಗಂಟೆ ೫.೦೦ರಿಂದ ಯಕ್ಷಗಾನ ವೈಭವ, ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ, ರಾತ್ರಿ ಗಂಟೆ ೮.೦೦ರಿಂದ ಕೆ.ಎಸ್.ಗೌಡ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಿಂದ ಧಕ್ಷಾಧ್ವರ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆ.

ಡಿ. ೨ ರಂದು ಅಪರಾಹ್ನ ೨.೩೦ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ವೈದೇಹಿ ಯವತಿ ಮಂಡಲ ಕಲ್ಮಡ್ಕ ಇವರಿಂದ ನೃತ್ಯ ವೈವಿಧ್ಯ, ಪೂರ್ವ ಪ್ರಾಥಮಿಕ ಮತ್ತು ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಸಂಜೆ ಗಂಟೆ ೬.೦೦ರಿಂದ ಸಮಾರೋಪ ಸಮಾರಂಭ ನಡೆಯಲಿದ್ದು, ಗೌಡ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಹಾಗೂ ರಾಸಾಯನಿಕ ರಸಗೊಬ್ಬರ ಸಚಿವ ಡಿ.ವಿ.ಸದಾನಂದರವರು ಸಭಾಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಉಸ್ತುವಾರಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನಪರಿಷತ್ ಸದಸ್ಯ ಭೋಜೇ ಗೌಡ, ಜಿ.ಪಂ. ಸದಸ್ಯ ಎಸ್.ಎನ್.ಮನ್ಮಥ, ತಾ.ಪಂ. ಉಪಾಧ್ಯಕ್ಷೆ ಶುಭದಾ ಎಸ್.ರೈ, ಎಣ್ಮೂರು ಗ್ರಾ.ಪಂ. ಅಧ್ಯಕ್ಷೆ ಜಾನಕಿ ಅಲೆಂಗಾರ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ದೇವರಾಜ್ ಕೆ.ಎಸ್., ಎ.ಪಿ.ಎಂ.ಸಿ. ಸದಸ್ಯ ಸಂತೋಷ್ ಜಾಕೆ, ಶ್ರೀ ಕ್ಷೇತ್ರ ಧ.ಗ್ರಾ.ಯೋ. ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ಪಂಜ ಕ್ಲಸ್ಟರ್ ಸಂಪನ್ಮೂಲ ಅಧಿಕಾರಿ ಯಶೋಧರ ಭಾಗವಹಿಸಲಿರುವರು.

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್, ತಾಹುದ್ ಹುದಾ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ನೂರುದ್ದೀನ್ ಜುಹಾರಿ, ಪಂಜ ಚರ್ಚ್‌ನ ಧರ್ಮಗುರು ಅನಿಲ್ ರೋಶನ್ ಲೋಬೋ ಗೌರವ ಉಪಸ್ಥಿತರಿರುವರು. ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸ್ಥಳೀಯ ಸಾಧಕರಿಗೆ, ಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ, ಸಂಸ್ಥೆಗೆ ಪಠ್ಯೇತರ ಚಟುವಟಿಕೆಗಳನ್ನು ಬೋಧಿಸಿದ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ರಾತ್ರಿ ಗಂಟೆ ೮.೦೦ರಿಂದ ಪದವಿ ಪೂರ್ವ ಕಾಲೇಜು ಮತ್ತು ಐಟಿಐ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಗಂಟೆ ೧೦.೦೦ ರಿಂದ ತೆಲಿಕೆದ ಗೊಂಚಿಲ್ ಎಂಬ ತುಳು ಹಾಸ್ಯಮಯ ಪ್ರಹಸನ, ಕಾಮೆಡಿ, ಸಾರೀ ಡ್ಯಾನ್ಸ್, ಮಿಮಿಕ್ರಿ ಸಿಂಗಿಂಗ್ ನಡೆಯಲಿದೆ ಎಂದು ಶಾಲಾ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.