ಜ.16 ,ಜ.21 : ಪೆರುವಾಜೆ ಜಲದುರ್ಗಾದೇವೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

Advt_Headding_Middle
Advt_Headding_Middle

ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜ.16 ರಿಂದ ಜ.21  ರವರೆಗೆ ಜಾತ್ರೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.
ಜ.10 ರಂದು ಮುಹೂರ್ತದ ಗೊನೆ ಕಡಿಯಲಾಗುವುದು.
ಜ.16 ರಂದು ಬೆಳಿಗ್ಗೆ ಗಂಟೆ 1೦.೦೦ ಕ್ಕೆ ಉಗ್ರಾಣ ಮುಹೂರ್ತ,ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ ಗಂಟೆ 7.೦೦ ಕ್ಕೆ ದೇವತಾ ಪ್ರಾರ್ಥನೆ, ಧ್ವಜಾರೋಹಣ ನಡೆಯಲಿರುವುದು. ರಾತ್ರಿ ಗಂಟೆ 7.3೦ ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ವಸಂತ ಕಟ್ಟೆ ಪೂಜೆ ನಡೆಯಲಿರುವುದು.
ಜ.17 ರಂದು ಬೆಳಿಗ್ಗೆ 8.3೦ ಕ್ಕೆ ಶ್ರೀ ದೇವರ ಬಲಿಹೊರಟು ಉತ್ಸವ, ಮಧ್ಯಾಹ್ನ ಗಂಟೆ 12.೦೦ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ ಗಂಟೆ 7.೦೦ ಕ್ಕೆ ಶ್ರೀ ದೇವರ ಬಲಿಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ.
ಜ.18 ರಂದು ಬೆಳಿಗ್ಗೆ ಬೆಳಿಗ್ಗೆ 8.3೦ ಕ್ಕೆ ಶ್ರೀ ದೇವರ ಬಲಿಹೊರಟು  ಉತ್ಸವ , ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ ಗಂಟೆ 7.೦೦ ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ , ದೀಪೋತ್ಸವ ವಸಂತ ಕಟ್ಟೆ ಪೂಜೆ ನಡೆಯಲಿದೆ.ಜ.19 ರಂದು ಬೆಳಿಗ್ಗೆ ಶ್ರೀ ದೇವರ ಬಲಿಹೊರಟು ಉತ್ಸವ ಮಧ್ಯಾಹ್ನ ಗಂಟೆ 12.೦೦ ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ,ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 7.೦೦ ಕ್ಕೆ ಶ್ರೀ ದೇವರ ಬಲಿಹೊರಟು ಉತ್ಸವ ವಸಂತಕಟ್ಟೆ ಪೂಜೆ, ಸವಾರಿಹೋಗಿ ಬಂದು ಬೆಡಿ ಕಟ್ಟೆಯಲ್ಲಿ ಸಿಡಿಮದ್ದು ಪದೆರ್ಶನ,ರಾತ್ರಿ ಗಂಟೆ 1೦.3೦ ಕ್ಕೆ ಮಹಾಪೂಜೆ, ನಂತರ ದೇವರ ಬಲಿ ಹೊರಟು ಶ್ರೀ ಭೂತ ಬಲಿ ಉತ್ಸವ, ಶಯನೋತ್ಸವ, ಕವಾಟ ಬಂಧನ, ಅನ್ನಸಂತರ್ಪಣೆ ನಡೆಯಲಿದೆ.
ಜ.2೦ ರಂದು ಬೆಳಿಗ್ಗೆ ಕವಾಟೋದ್ಘಾಟನೆ, ಶ್ರೀ ದೇವರಿಗೆ ತೈಲಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ ,ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ತುಲಾಭಾರ ಸೇವೆ, ಯಾತ್ರಾ ಹೋಮ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 7.೦೦ ಕ್ಕೆ ಶ್ರೀ ದೇವರ ಬಲಿಹೊರಟು ಕಟ್ಟೆಪೂಜೆ, ಅವಭೃತ ಸ್ನಾನ ಆಗಿ ದೇವಸ್ತಾನಕ್ಕೆ ಬಂದು ಧ್ವಜಾವರೋಹಣ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ , ಉಳ್ಳಾಕುಲು, ಮೈಷಂತಾಯ ದೈವದ ಭಂಡಾರ ತೆಗೆಯುವುದು. ಜ.21 ರಂದು ಬೆಳಿಗ್ಗೆ ಗಂಟೆ 7.೦೦ ರಿಂದ ಮಹಾಗಣಪತಿ ಹೋಮ, ಪಂಚವಿಂಶನಿ ಕಲಶಪೂಜೆ, ನಂತರ ಶ್ರೀ ಉಳ್ಳಾಕುಳು ಮತ್ತು ಮೈಷಂತಾಯ ದೈವಗಳ ನೇಮೋತ್ಸವ, ಪ್ರಸಾದ ವಿತರಣೆ, ಪಿಲಿಭೂತದ ಭಂಡಾರ ತೆಗೆಯುವುದು. ಮಧ್ಯಾಹ್ನ ಶ್ರೀ ದೇವರಿಗೆ ಸಂಪ್ರೋಕ್ಷಣೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಮಹಾಅನ್ನಸಂತರ್ಪಣೆ ನಡೆಯಲಿದೆ.
ಅಪರಾಹ್ನ ಗಂಟೆ 3.೦೦ ರಿಂದ ಪಿಲಿಭೂತದ ನೇಮೋತ್ಸವ , ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 8.3೦ ಕ್ಕೆ ಕಲ್ಲುರ್ಟಿ ದೈವದ ನೇಮ, ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನ ಶೆಟ್ಟಿ ಪಾಲ್ತಾಡು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.