ಸುಬ್ರಹ್ಮಣ್ಯ: ಚಂದ್ರಶೇಖರ ನಾಯರ್ ರವರಿಗೆ ಅತ್ಯುತ್ತಮ ರಾಷ್ಟ್ರೀಯ ಅಧಿಕಾರಿ ಪುರಸ್ಕಾರ

Advt_Headding_Middle
Advt_Headding_Middle

ಕುಕ್ಕೆ ಸುಬ್ರಹ್ಮಣ್ಯದ ಜೇಸಿಐ ಸುಬ್ರಹ್ಮಣ್ಯ ಕುಕ್ಕೆಶ್ರೀಯ ಪೂರ್ವಾಧ್ಯಕ್ಷ, ರಾಷ್ಟ್ರೀಯ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ರಾಷ್ಟ್ರೀಯ ನಿರ್ದೇಶಕ ಚಂದ್ರಶೇಖರ ನಾಯರ್ ರವರಿಗೆ ಜೇಸಿಐ ಭಾರತದ ಅತ್ಯುತ್ತಮ ರಾಷ್ಟ್ರೀಯ ಅಧಿಕಾರಿ ಪುರಸ್ಕಾರ ಲಭಿಸಿದೆ.

ರಾಷ್ಟ್ರೀಯ ಮಟ್ಟದಲ್ಲಿ ಜೇಸೀಸ್ ಅಧಿಕಾರಿಯಾಗಿ ಇವರು ಮಾಡಿದ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಜೈಪುರದಲ್ಲಿ ಇತ್ತೀಚೆಗೆ ನಡೆದ 63ನೇಯ ರಾಷ್ಟ್ರೀಯ ಸಮ್ಮೇಳನದಲ್ಲಿ ಜೇಸಿಐ ರಾಷ್ಟ್ರೀಯ ಅಧ್ಯಕ್ಷ ಅರ್ಪಿತ್ ಹಾಥಿ ಪುರಸ್ಕಾರ ನೀಡಿ ಗೌರವಿಸಿದರು. ಇವರು ಈ ಹಿಂದೆ ರಾಷ್ಟ್ರ ಮಟ್ಟದ ಅತ್ಯುತ್ತಮ ವಲಯಾಧ್ಯಕ್ಷ, ಅತ್ಯುತ್ತಮ ವಲಯ ಉಪಾಧ್ಯಕ್ಷ, ಅತ್ಯುತ್ತಮ ವಲಯ ಘಟಕಾಧ್ಯಕ್ಷ, ಅತ್ಯುತ್ತಮ ವಲಯ ನಿರ್ದೇಶಕ ಪ್ರಶಸ್ತಿಗಳನ್ನು ಪಡೆದಿರುವುದನ್ನು ಇಲ್ಲಿ ನೆನಪಿಸಬಹುದು. ಇವರು ಸುಬ್ರಹ್ಮಣ್ಯದ ಅನುಗ್ರಹ ಎಜ್ಯುಕೇಶನ್ ಟ್ರಸ್ಟ್‌ನ ಸಂಸ್ಥಾಪಕ ದಿ. ಜೇಸೀ ಕುಮಾರ್‌ನಾಯರ್‌ರವರ ಪುತ್ರ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.