ಕೆ.ವಿ.ಜಿ. ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

Advt_Headding_Middle
Advt_Headding_Middle


ಕೆ.ವಿ.ಜಿ.ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವವು ಜ.5  ರಂದು ಸುಳ್ಯದ ಕುರುಂಜಿ ಜಾನಕಿ ವೆಂಕಟ್ರಮಣ ಸಭಾಭವನದಲ್ಲಿ ಜರುಗಿತು. ಸ್ವಾಗತ ನೃತ್ಯದೊಂದಿಗೆ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಚಾರ್ಯರಾದ ಡಾ.ಯಶೋದಾ ರಾಮಚಂದ್ರ ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿದರು. ಮುಖ್ಯ ಅತಿಥಿಗಳಾಗಿ ಕೆ.ವಿ.ಜಿ.ಐ.ಪಿ.ಎಸ್. ನ ಪ್ರಾಚಾರ್ಯರಾದ ಸುನಿಲ್ ಕುಮಾರ್.ಕೆ.ಸಿ. ಆಗಮಿಸಿ ವಿದ್ಯಾರ್ಥಿಗಳಿಗೆ ಕಾಲೇಜು ಜೀವನದಲ್ಲಿ ಹೇಗಿರಬೇಕು. ಎಂತಹ ಉದಾತ್ತ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ರಾಮಾಯಣದ ಉದಾಹರಣೆಯೊಂದಿಗೆ ವಿವರಿಸಿದರು. ಬಳಿಕ ಕಾಲೇಜಿನ ವಿದ್ಯಾರ್ಥಿಗಳಿಂದ ಬಗೆಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು. ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಾದ ದಿಯಾ ಮರಿಯಂ ಹಾಗೂ ಎಂ.ಧೀಮಂತ್ ಕಾರ್ಯಕ್ರಮ ನಿರೂಪಿಸಿದರು. ಇಂಗ್ಲಿಷ್ ಉಪನ್ಯಾಸಕಿ ಮಲ್ಲಿಕಾ ಸಹಕರಿಸಿದರು. ಕಾಲೇಜಿನ ಉಪಪ್ರಾಚಾರ್ಯರಾದ ದೀಪಕ್ ವೈ.ಆರ್ ಹಾಗೂ ಎಲ್ಲ ಉಪನ್ಯಾಸಕರು ಹಾಗೂ ಬೋಧಕೇತರ ವರ್ಗದವರು ಉಪಸ್ಥಿತರಿದ್ದು ವಾರ್ಷಿಕೋತ್ಸವದ ಯಶಸ್ಸಿಗೆ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.