Breaking News

ಬೆಳ್ಳಾರೆ ಪಂಚಾಯತ್ ನಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಕುರಿತು ವಿಶೇಷ ಗ್ರಾಮ ಸಭೆ

Advt_Headding_Middle
Advt_Headding_Middle


ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಕುರಿತು ವಿಶೇಷ ಗ್ರಾಮ ಸಭೆಯು ಜ.೮ ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಕುಡಿಯುವ ನೀರು ಮತ್ತು ನೈರ್ಮಲ್ಯದ ಬಗ್ಗೆ ಉದಯ ತುಮಕೂರುರವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಕುಂತಳಾ ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಂಜಯ ಕೆ.ಆರ್.ರವರು ಪ್ರಾಸ್ತಾವಿಕವಾಗಿ ಮಾತನಾಡಿ ಕುಡಿಯುವ ನೀರಿನ ಅಗತ್ಯತೆ ಮತ್ತು ನೈರ್ಮಲ್ಯದ ಬಗ್ಗೆ ವಿವರಿಸಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮುಸ್ತಾಫ ಉಪಸ್ಥಿತರಿದ್ದರು.
ಕಾರ್ಯದರ್ಶಿ ಶ್ರೀಮತಿ ಭವ್ಯ ರವರು ಸ್ವಾಗತಿಸಿ ವಂದಿಸಿದರು.
ಸಿಬ್ಬಂದಿ ವರ್ಗದವರು ಸಹಕರಿಸಿದರು. ಕಾರ್ಯಕ್ರಮದಲ್ಲಿ ಹಲವಾರು ಜನರು ಪಾಲ್ಗೊಂಡಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.