Breaking News

ಅರಂತೋಡು ಗ್ರಾ.ಪಂ. ವ್ಯಾಪ್ತಿಯ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುದ್ದಲಿಪೂಜೆ

Advt_Headding_Middle
Advt_Headding_Middle

ಅರಂತೋಡು ಗ್ರಾ.ಪಂ. ವ್ಯಾಪ್ತಿಯಲ್ಲಿ ಸುಮಾರು 13 ಲಕ್ಷ ರೂ. ವೆಚ್ಚದಲ್ಲಿ ಕೊಡೆಂಕಿರಿ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುದ್ದಲಿಪೂಜೆಯನ್ನು ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ ದೀಪ ಬೆಳಗಿಸಿ ನೆರವೇರಿಸಿದರು.

 

 

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಲೀಲಾವತಿ ಕೊಡೆಂಕಿರಿ, ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಪಿ.ಡಿ.ಒ. ಜಯಪ್ರಕಾಶ್, ಅರಂತೋಡು ತೊಡಿಕಾನ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ತಾ.ಪಂ. ಸದಸ್ಯೆ ಪುಷ್ಪಾ ಮೇದಪ್ಪ, ಗ್ರಾ.ಪಂ. ಸದಸ್ಯರುಗಳು, ಭವಾನಿಶಂಕರ ಅಡ್ತಲೆ ಹಾಗೂ ಊರವರು ಉಪಸ್ಥಿತರಿದ್ದರು. ತ್ಯಾಜ್ಯ ಘಟಕದ ಬಗ್ಗೆ ಗ್ರಾ.ಪಂ. ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳರು ಮಾಹಿತಿ ನೀಡಿದರು. ನಂತರ ಗ್ರಾ.ಪಂ. ಸಭಾಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.