ಜ.22 : ಸುಬ್ರಹ್ಮಣ್ಯ ಕೆಎಸ್‌ಎಸ್ ಕಾಲೇಜಿನಲ್ಲಿ ಸಾಮಾಜಿಕ ಉದ್ಯಮಶೀಲತೆ ಹಾಗೂ ಸುಸ್ಥಿರ ಅಭಿವೃದ್ಧಿ ಕುರಿತು ರಾಷ್ಟ್ರೀಯ ಕಾರ‍್ಯಗಾರ

Advt_Headding_Middle
Advt_Headding_Middle

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಜ.22 ರಂದು ಸಾಮಾಜಿಕ ಉದ್ಯಮಶೀಲತೆ ಹಾಗೂ ಸುಸ್ಥಿರ ಅಭಿವೃದ್ಧಿ ಕುರಿತು ರಾಷ್ಟ್ರೀಯ ಕಾರ‍್ಯಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೋ. ರಂಗಯ್ಯ ಶೆಟ್ಟಿಗಾರ್ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಕಾರ‍್ಯಾಗಾರವನ್ನು ರಾಜ್ಯ ವಿಧಾನಪರಿಷತ್ ಸದಸ್ಯ ಭೋಜೇಗೌಡ ಉದ್ಘಾಟಿಸುವರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅಧ್ಯಕ್ಷತೆ ವಹಿಸುವರು. ಈ ಕಾರ‍್ಯಗಾರದಲ್ಲಿ ವಿವಿಧ ಕಡೆಗಳ ೧೫೦ ಂಂದಿ ಉಪನ್ಯಾಸಕರುಗಳು, ಹಾಗೂ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಸೇರಿ ೩೫೦ ಮಂದಿ ಶಿಬರಾರ್ಥಿಗಳು ಭಾಗವಹಿಸಲಿರುವರು ಎಂದರು.
ಸಂಶೋಧನೆ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರುಗಳಿಗೆ ವಿಷಯ ಕುರಿತು ಚರ್ಚಿಸಲು ವೇದಿಕೆ ಒದಗಿಸುವದು, ಸಾಮಾಜಿಕ ಉದ್ಯಮಶೀಲತೆಯಲ್ಲಿ ಹೊಸ ಅವಕಾಶಗಳನ್ನು ಪರಿಶೋಧಿಸುವಲ್ಲಿ ಸಹಾಯ ಮಾಡುವುದು, ಕ್ರೀಯಾತ್ಮಕ ಚಿಂತನೆಗೆ ಅವಕಾಶ ನೀಡುವದು, ಸುಸ್ಥಿರ ಅಭಿವೃದ್ಧಿಯ ಪ್ರಾಮುಖ್ಯತೆ ಬಗ್ಗೆ ಅರಿವು ಮೂಡಿಸುವದು, ಭಾರತ ಪ್ರಸ್ತುತ ಪರಿಸ್ಥಿತಿಯಲ್ಲಿ ಸಾಮಾಜಿಕ ಉದ್ಯಮಶೀಲತೆ ಪಾತ್ರವನ್ನು ವಿವರಿಸುವುದು, ಸಮಾಜ ಎದುರಿಸುತ್ತಿರುವ ಸಮಸ್ಯೆಯ ಕುರಿತು ಗಂಭೀರ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸುವ ಉದ್ದೇಶವನ್ನು ಈ ಕಾರ‍್ಯಾಗಾರ ಹೊಂದಿದೆ ಎಂದವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಉಪಪ್ರಾಂಶುಪಾಲ ಪ್ರೋ ಮಂಜುನಾಥ ಎನ್ ಭಟ್, ಸಂಘಟನಾ ಕಾರ್ಯದರ್ಶಿ ಪ್ರೋ. ಉದಯಕುಮಾರ್ ಕೆ, ಸಂಯೋಜಕ ವಿನ್ಯಾಸ್ ಎಚ್ ಹೊಸೋಳಿಕೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.