ಬೆಳ್ಳಾರೆ ಜ್ಞಾನದೀಪದಲ್ಲಿ ಮೊಂಟೆಸರಿ ವಿದ್ಯಾರ್ಥಿ ಶಿಕ್ಷಕಿಯರಿಗೆ ಭಾಷಣ ಕಲೆ ತರಬೇತಿ

Advt_Headding_Middle
Advt_Headding_Middle


ವಿಷಯದ ಬಗ್ಗೆ ಆಳವಾದ ಜ್ಞಾನವನ್ನು ಪಡೆದು ಮಾಡುವ ಭಾಷಣಗಳು ಪರಿಣಾಮಕಾರಿಯಾಗುತ್ತದೆ. ಯಶಸ್ವಿ ನಾಯಕನ ಸೃಷ್ಠಿ ಆತನ ಭಾಷಣದಿಂದಲೇ ಆರಂಭಗೊಳ್ಳುತ್ತದೆ ಎಂದು ಜೇಸಿಐನ ವಲಯ ಕಾರ್ಯಕ್ರಮ ನಿರ್ದೇಶಕ, ವಲಯ ತರಬೇತುದಾರ ರಾಘವೇಂದ್ರ ಹೊಳ್ಳ ಹೇಳಿದರು.
ಅವರು ಬೆಳ್ಳಾರೆ ಜೇಸಿಐ ಆಶ್ರಯದಲ್ಲಿ ಜ್ಞಾನದೀಪ ಮೊಂಟೆಸರಿ ಶಿಕ್ಷಕಿಯರ ತರಬೇತಿಯ ವಿದ್ಯಾರ್ಥಿ ಶಿಕ್ಷಕಿಯರುಗಳಿಗೆ ನಡೆದ ಪರಿಣಾಮಕಾರಿ ಭಾಷಣ ಕಲೆ ತರಬೇತು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತರಬೇತು ನೀಡಿದರು.
ಬೆಳ್ಳಾರೆ ಜೇಸಿಐ ಪೂರ್ವಾಧ್ಯಕ್ಷ ಮಿಥುನ್ ಶೆಣೈ ತರಬೇತು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಬೆಳ್ಳಾರೆ ಜೇಸಿಐ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ,ಯುವ ಜೇಸೀ ಅಧ್ಯಕ್ಷ ಸಾಗರ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಾಯಿಶ್ವೇತ ಜೇಸೀವಾಣಿ ವಾಚಿಸಿದರು. ಕಾರ್ಯದರ್ಶಿ ಪ್ರವೀಣ್ ಬೆಳ್ಳಾರೆ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.