ಎನ್ನೆಂಸಿ: ಪರೀಕ್ಷಾ ಪೂರ್ವ ತಯಾರಿ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Advt_Headding_Middle
Advt_Headding_Middle

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕವು ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ ಪಿ ಯು ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಂಡಿತು.


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ವಲಯ ತರಬೇತುದಾರರು, ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ ಅನುರಾಧಾ ಕುರುಂಜಿಯವರು ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಪರೀಕ್ಷೆಗಳು ಅನಿವಾರ‍್ಯ, ವಿದ್ಯಾರ್ಥಿಗಳು ಆತ್ಮವಿಶ್ವಾಸ ಮತ್ತು ಆತ್ಮ ಸ್ಥೈರ್ಯದಿಂದ ಓದಿನಲ್ಲಿ ತೊಡಗಿಸಿಕೊಂಡಾಗ ಸುಲಭವಾಗಿ ದಡಸೇರಬಹುದು ಮತ್ತು ವಿದ್ಯಾರ್ಥಿ ಜೀವನದಲ್ಲಿ ಪಡೆದ ಮೌಲ್ಯಗಳನ್ನು ಬದುಕಿಗೆ ಅಳವಡಿಸಿಕೊಂಡಾಗ ಒಳ್ಳೆಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಿದಾನಂದ ಎಂ ಎಸ್ ಮಾತನಾಡಿ, ಇಂತಹ ಮೌಲ್ಯಯುತ ಕಾರ್ಯಕ್ರಮಗಳನ್ನು ನಮ್ಮ ಕಾಲೇಜಿನಲ್ಲಿ ಹಮ್ಮಿಕೊಂಡದ್ದು ನಮ್ಮ ಮಕ್ಕಳ ಜ್ಞಾನಾಭಿವೃದ್ಧಿಗೆ ಸಹಕಾರಿ, ಯಾಂತ್ರಿಕ ಬದುಕಿನಿಂದ ಹೊರಬಂದು ಶಿಕ್ಷಣವನ್ನು ಪಡೆಯುಂತಾಗಲು ಇಂತಹ ತರಬೇತಿಗಳ ಅಗತ್ಯವಿದೆ ಎಂದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನೆಹರೂ ಮೆಮೋರಿಯಲ್ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಭವ್ಯಾ ಪಿ ಎಂ ಮಾತನಾಡಿ, ಕಾಲೇಜಿನ ರೆಡ್ ಕ್ರಾಸ್ ಘಟಕ ಅತ್ಯುತ್ತಮ ಘಟಕ ಪ್ರಶಸ್ತಿ ಪಡೆಯಲು ಇಂತಹ ವೈಶಿಷ್ಟ್ಯಪೂರ್ಣ ಹಾಗೂ ಸಮಾಜ ಮುಖಿ ಕಾರ್ಯಕ್ರಮಗಳ ಆಯೋಜನೆಯೇ ಕಾರಣ, ನಮ್ಮಲ್ಲಿದ್ದ ಜ್ಞಾನವನ್ನು ಬೇರೆಯವರಿಗೆ ತಿಳಿಸುವ ಕೆಲಸವನ್ನು ಈ ಘಟಕ ಮಾಡುತ್ತಿದೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭಾವೇದಿಕೆಯಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಉಪನ್ಯಾಸಕಿ ದಿವ್ಯಶ್ರೀ ಬಿ, ಪ್ರಾಣಿಶಾಸ್ತ್ರ ವಿಭಾಗದ ಉಪನ್ಯಾಸಕಿ ಶರ್ಮಿಳಾ ಕೆ ಎಸ್, ಆಂಗ್ಲ ಭಾಷಾ ವಿಭಾಗದ ಉಪನ್ಯಾಸಕಿ ಕಾವ್ಯ ಕೆ ಜಿ, ಘಟಕ ನಾಯಕಿ ನಳಿನಿ ಎಂ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯದ ಉಪನ್ಯಾಸಕರು ಉಪಸ್ಥಿತರಿದ್ದರು.
ಪಲ್ಲವಿ ಪ್ರಾರ್ಥಿಸಿ, ಅನ್ವಿತಾ ಸ್ವಾಗತಿಸಿ, ರಾಜೇಶ್ವರಿ ಎಂ. ವಂದಿಸಿದರು. ಕಾವ್ಯಶ್ರೀ ಕೆ.ಪಿ. ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.